314
ಉಡುಪಿ : ಮಣಿಪಾಲದ ಲಕ್ಷ್ಮೀಂದ್ರ ನಗರದ ಬಳಿಯ ಮುಖ್ಯ ರಸ್ತೆಯ ಅನಂತ ಕಲ್ಯಾಣ ಮಾರ್ಗದಲ್ಲಿ ಹೊಟೇಲ್ ಕಾರ್ಮಿಕನನ್ನು ಬಿಯರ್ ಬಾಟಲಿಯಿಂದ ಚುಚ್ಚಿ ಹತ್ಯೆಗೈದ ಘಟನೆ ನಡೆದಿದೆ. ಹತ್ಯೆಯಾದವನನ್ನು ಹೊನ್ನಾವರದ ಕಾಸರಕೋಡು ನಿವಾಸಿ ಶ್ರೀಧರ ನಾಯಕ ಎಂದು ತಿಳಿದು ಬಂದಿದೆ ಶ್ರೀಧರ ನಾಯಕ್ ಹೋಟೆಲ್ ನಲ್ಲಿ ಕುಕ್ ಆಗಿ ಕೆಲಸ ಮಾಡುತ್ತಿದ್ದರು
ಘಟನೆ ಇಂದು ಶುಕ್ರವಾರ ಬೆಳಿಗ್ಗೆ ಆಗಿರುವ ಸಾಧ್ಯತೆ ಇದ್ದು ಶುಕ್ರವಾರ ಬೆಳಗ್ಗೆ ವಾಯು ವಿಹಾರಕ್ಕೆ ಹೋದಾಗ ಸ್ಥಳೀಯರ ಗಮನಕ್ಕೆ ಬಂದಿದೆ. ಸ್ಥಳಕ್ಕೆ ಎಸ್ಪಿ ಡಾ.ಅರುಣ್ ಕುಮಾರ್, ಮಣಿಪಾಲ ಇನ್ಸ್ ಪೆಕ್ಟರ್ ದೇವರಾಜ್, ಮಂಜುನಾಥ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

