ಹಾಸನ: ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ನಾಲ್ಕನೇ ಪ್ರಮುಖ ಆರೋಪಿ ಸುಳ್ಯ ಮೂಲದ ಮುಸ್ತಾಫಾ ಫೈಚಾರ್ ಸೇರಿ ಮೂವರನ್ನು ಸಕಲೇಶಪುರದ ಆನೆಮಹಾಲ್ ಸಮೀಪ ಎನ್‌ಎಐ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.
ಸೋಮವಾರಪೇಟೆ ಮೂಲದ ಇಲಿಯಾಸ್ ಹಾಗೂ ಇವರಿಗೆ ಆಶ್ರಯ ನೀಡಿದ್ದ ಎನ್ನಲಾಗಿರುವ ಸ್ಥಳೀಯ ನಿವಾಸಿ ಸಿರಾಜ್‌ನನ್ನೂ ವಶಕ್ಕೆ ಪಡೆಯಲಾಗಿದೆ. ಮುಸ್ತಾಫಾ ಪೈಚಾರ್ ಹಾಗೂ ಇಲಿಯಾಸ್ ಎರಡು ವರ್ಷಗಳ ಹಿಂದೆ ಸುಳ್ಯದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದು, ಇವರಿಗೆ ಆನೆಮಹಲ್‌ನ ಸಿರಾಜ್ ಆಶ್ರಯ ನೀಡಿ ಶುಂಠಿ ಬೆಳೆಯಲು ಅವಕಾಶ ಮಾಡಿಕೊಟ್ಟಿದ್ದಲ್ಲದೇ ಅಡಗಿ ಕೂರಲು ಸಹಕರಿಸಿದ್ದಾನೆ ಎಂದು ಹೇಳಲಾಗಿದೆ.
ಕೊಲೆಗಾರರಿಗೆ ಆಶ್ರಯ ನೀಡುವುದೂ ಸಹ ಘೋರ ಅಪರಾಧವಾಗಿದ್ದು ಸಿರಾಜ್‌ನನ್ನು ತೀವ್ರ ತನಿಖೆಗೆ ಒಳಪಡಿಸಿ ಆತನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಸಕಲೇಶಪುರ ಡಿವೈಎಸ್‌ಪಿ ಪ್ರಮೋದ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದರು.