ಉಡುಪಿ : ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಚ್ಚಟ್ಟು ತೊಂಬಟ್ಟು ಗ್ರಾಮದ ನಿವಾಸಿ ನಕ್ಸಲ್ ಮಹಿಳೆ ಲಕ್ಷ್ಮೀ ಎಂಬವಳು ಉಡುಪಿಯಲ್ಲಿ ಇಂದು ಆದಿತ್ಶವಾರ ಶರಣಾಗುವ ಮೂಲಕ ಮುಖ್ಯ ವಾಹಿನಿಗೆ ಬಂದಿದ್ದಾಳೆ
ಪೊಲೀಸ್ ಭದ್ರತೆಯೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಲಕ್ಷ್ಮೀ ಜೊತೆ ಆಕೆಯ ಸಹೋದರ ವಿಠಲ ಪೂಜಾರಿ ಹಾಗೂ ಸಂಬಂಧಿಕರಿದ್ದರು. ನಕ್ಸಲ್ ಶರಣಾಗತಿ ಹಾಗೂ ಪುನರ್ವಸತಿ ಸಮಿತಿಯ ಸದಸ್ಯ ಶ್ರೀಪಾಲ ಈ ವೇಳೆ ಹಾಜರಿದ್ದರು
ಈ ಸಂದರ್ಭದಲ್ಲಿ ಕುಂದಾಪುರ ಡಿವೈಎಸ್ಪಿ ಎಚ್ ಡಿ ಕುಲಕರ್ಣಿ, ಉಡುಪಿ ಡಿವೈಎಸ್ಪಿ ಡಿಟಿ ಪ್ರಭು ಹಾಗೂ ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಹಾಜರಿದ್ದರು.
ಲಕ್ಷ್ಮೀ ಮೇಲೆ ಶಂಕರನಾರಾಯಣ, ಅಮಾಸೆಬೈಲ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳಿವೆ.