113
ಚಿತ್ರದುರ್ಗ : ಕೆ.ಸಿ.ವೀರೇಂದ್ರ, ಆತನ ಸಹೋದರರು ಹಾಗೂ ಪಾಲುದಾರರ ಮನೆಗಳು ಹಾಗೂ ಕಚೇರಿಗಳು ಸೇರಿ ಚಿತ್ರದುರ್ಗ, ಚಳ್ಳಕೆರೆ, ಬೆಂಗಳೂರು ನಗರ, ಹುಬ್ಬಳ್ಳಿ, ಜೋಧಪುರ, ಮುಂಬೈ, ಗೋವಾ ಸೇರಿ ರಾಜ್ಯ ಹಾಗೂ ಹೊರ ರಾಜ್ಯಗಳ 31 ಸ್ಥಳಗಳ ಮೇಲೆ ಇ.ಡಿ. ಅಧಿಕಾರಿಗಳು ಶುಕ್ರವಾರ ನಸುಕಿನಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದರು.
ಶನಿವಾರವೂ ಶೋಧ ಕಾರ್ಯ ಮುಂದುವರೆಸಿದ್ದರು. ಶೋಧ ಕಾರ್ಯದ ವೇಳೆ 12 ಕೋಟಿ ಕ್ಯಾಶ್,6 ಕೋಟಿ ಚಿನ್ನ,1 ಕೋಟಿ ವಿದೇಶಿ ಕರೆನ್ಸಿ, 003 ಫ್ಯಾನ್ಸಿ ಸಂಖ್ಯೆಯ 4 ಕಾರು ಹಾಗೂ ಮಹತ್ವದ ದಾಖಲೆಗಳನ್ನು ಪತ್ತೆಯಾಗಿದ್ದುಅವುಗಳನ್ನು ಜಪ್ತಿ ಮಾಡಲಾಗಿದೆ.
ಪಪ್ಪಿ ಒಡೆತನದ 5 ಕ್ಯಾಸಿನೋಗಳ ಮೇಲೂ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ

