Home » ಇಲಿ ಪಾಷಾಣ ಸೇವಿಸಿ ವ್ಯಕ್ತಿ ಸಾವು
 

ಇಲಿ ಪಾಷಾಣ ಸೇವಿಸಿ ವ್ಯಕ್ತಿ ಸಾವು

by Kundapur Xpress
Spread the love

ಕುಂದಾಪುರ: ಕೊಲ್ಲೂರು ಪೊಲೀಸ್‌ ಠಾಣಾ ವ್ಯಾಪ್ತಿಯ ನಿವಾಸಿಯಾದ ಪ್ರಕಾಶ್ (62ವರ್ಷ) ಎಂಬವರು ಇಲಿಗೆ ಹಾಕುವ ವಿಷ ಪದಾರ್ಥ ಸೇವಿಸಿ ಮೃತಪಟ್ಟಿದ್ದಾರೆ. ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಡಿ.18ರಂದು ವಾಂತಿ ಮಾಡಿಕೊಂಡಿದ್ದು, ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂದರ್ಭ ಅವರು ಇಲಿಗೆ ಹಾಕುವ ವಿಷ ಪದಾರ್ಥ ಸೇವಿಸಿರುವುದಾಗಿ ಹೇಳಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಅವರು ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಸಹೋದರ ಸುಕುಮಾರ್ ಕೊಲ್ಲೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ

   

Related Articles

error: Content is protected !!