Home » ಬಾಲಕಿ ಮೇಲೆ ಅತ್ಯಾಚಾರ – ಆರೋಪಿಯ ಬಂಧನ
 

ಬಾಲಕಿ ಮೇಲೆ ಅತ್ಯಾಚಾರ – ಆರೋಪಿಯ ಬಂಧನ

by Kundapur Xpress
Spread the love

ಕೋಟ : ಕೋಟ ಬನ್ನಾಡಿ ಸಮೀಪದ ಹರೀಶ್ ಪೂಜಾರಿ ಎಂಬಾತ ಸಂಬಂಧಿಯಾದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ಬನ್ನಾಡಿ ಹರೀಶ್ ಪೂಜಾರಿ ಎಂಬಾತನನ್ನು ಪೊಲೀಸರು ಪೋಕ್ಸೋ ಕಾಯಿದೆಯಡಿ ಬಂಧಿಸಿದ್ದಾರೆ.

ಗ್ರಾನೈಟ್ ಕೆಲಸ ಮಾಡಿಕೊಂಡಿದ್ದ ಆರೋಪಿ ಬನ್ನಾಡಿ ಹರೀಶ್ ಪೂಜಾರಿ ಉಡುಪಿ ಮೂಲದ 9ನೇ ತರಗತಿಯ ಸಂತ್ರಸ್ಥ ಬಾಲಕಿಯ ಸಂಬಂಧಿಯಾಗಿದ್ದು ಜುಲೈ 28 ರಂದು ಉಡುಪಿಯಲ್ಲಿರುವ ಬಾಲಕಿಯ ಮನೆಗೆ ಬಂದಿದ್ದು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಾಲಕಿಯನ್ನು ಪುಲಾಯಿಸಿ ಅತ್ಯಾಚಾರ ಎಸಗಿದ್ದಾನೆ

ಬಾಲಕಿಯ ಅರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ ಬಾಲಕಿಯನ್ನು ಪೋಷಕರು ವಿಚಾರಿಸಿದಾಗ ಬಾಲಕಿ ಗರ್ಭವತಿಯಾದ ಘಟನೆ ಬೆಳಕಿಗೆ ಬಂದಿದೆ.

ಪೋಷಕರು ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ಹರೀಶ್ ಪೂಜಾರಿ ವಿರುದ್ಧ ಪ್ರಕರಣ ದಾಖಲಿಸಿದ್ದು ಆರೋಪಿಯನ್ನು ಬಂಧಿಸಿದ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

 

Related Articles

error: Content is protected !!