ಮಂಗಳೂರು: ರೌಡಿಶೀಟರ್ ಲಿಸ್ಟ್‌ನಲ್ಲಿ ಗುರುತಿಸಿಕೊಂಡಿದ್ದ ಶರಣ್ ಯಾನೆ ಆಕಾಶ ಭವನ ಕರಣ್ ಎಂಬಾತನ ಮೇಲೆ ಪೊಲೀಸರು ಗುಂಡುಹಾರಿಸಿದ ಘಟನೆ ಮಂಗಳವಾರ ನಡೆದಿದೆ. ಈತ ಪರಾರಿಯಾಗಲು ಯತ್ನಿಸುವ ವೇಳೆ ಗುಂಡು ಹಾರಿಸಲಾಗಿದ್ದು, ಬಳಿಕ ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ ನಗರದ ಜೆಪ್ಪು ಕುಡುಪಾಡಿಯಲ್ಲಿ ಘಟನೆ ನಡೆದಿದೆ. ಜೆಪ್ಪುವಿನಲ್ಲಿ ಶರಣ್ ಇರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪಿಎಸ್ಐ ಸುದೀಪ್ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿದೆ. ಆದರೆ ಶರಣ್ ತಪ್ಪಿಸಲು ಯತ್ನಿಸಿದ್ದ ಈ ವೇಳೆ ಫೈರಿಂಗ್ ನಡೆಸಿದೆ. ಶರಣ್ ಆಕಾಶಭವನ ವಿರುದ್ಧ ಈಗಾಗಲೇ ಕೊಲೆ, ಕೊಲೆ ಯತ್ನ ಪೋಕ್ಲೋ ಸೇರಿದಂತೆ 25ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಈತನನ್ನು ಈ ಹಿಂದೆ ಪೊಲೀಸರು ಬಂಧಿಸಲು ತೆರಳಿದ್ದಾಗ ಆತ ಪೊಲೀಸರ ಮೇಲೆಯೇ ತನ್ನ ಕಾರು ಹತ್ತಿಸಲು ಯತ್ನಿಸಿದ್ದ. ಆಸ್ಪತ್ರೆಗೆ ಭೇಟಿ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪ್ ಅಗರವಾಲ್ ಅವರು ಆತನ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ
ಜ 5 ರಂದು ರಾತ್ರಿ ಮಂಗಳೂರಿನ ಸಿಸಿಬಿ ಪೊಲೀಸರು ಕಾವೂರಿನಲ್ಲಿ ರೌಡಿಯನ್ನು ಹಿಡಿಯಲು ಯತ್ನಿಸಿದಾಗ ಕಾರನ್ನು ಹಾಯಿಸಿ ಕೊಲೆಗೆ ಯತ್ನಿಸಿದ ಬಗ್ಗೆ ಕಾವೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆಕಾಶಭವನ್ ಶರಣ್ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದರು.
ಶರಣ್ ಸುರೇಂದ್ರ ಬಂಟ್ವಾಳ್ ಪ್ರಕರಣದಲ್ಲಿ ಜೈಲಿನಲ್ಲಿದ್ದುಕೊಂಡೇ ಸುಪಾರಿ ಪಡೆದು ತನ್ನ ಸಹಚರರ ಮೂಲಕ ಕೊಲೆ ನಡೆಸಿದ್ದಾಗಿ ಆರೋಪಿಸಲಾಗಿದೆ. ಸುಳ್ಯದಲ್ಲಿ ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣದಲ್ಲಿಯೂ ಸುಪಾರಿ ಪಡೆದು ತನ್ನ ಸಹಚರರ ಮೂಲಕ ಮಾಡಿಸಿದ್ದ ಎನ್ನುವುದು ತನಿಖೆಯಲ್ಲಿ ವ್ಯಕ್ತವಾಗಿತ್ತು