ಧಾರವಾಡ ಹಿಂದು ಬಾಲಕಿ ಮೇಲೆ ಅತ್ಯಾಚಾರವೆಸಗಿ, ಗರ್ಭಿಣಿಯಾಗಲು ಕಾರಣನಾದ ಪೋಕೋ ಪ್ರಕರಣದ ಆರೋಪಿಯೊಬ್ಬ, ಬಂಧಿಸಿ ಕರೆತರುವಾಗ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ, ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದು, ಗಾಯಗೊಂಡ ಆತನನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿದೆ. ಸದ್ದಾಂ ಹುಸೇನ್ ಎಂಬಾತ ಆರೋಪಿ, ಹಲ್ಲೆಗೊಳಗಾದ ಪಿಐಸಂಗಮೇಶ, ಪೊಲೀಸ್ ಪೇದೆ ಅರುಣ ಗಾಯಗೊಂಡಿದ್ದು, ಧಾರವಾಡದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ
ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣ ಇನ್ನೂ ಜನಮಾನಸದಲ್ಲಿ ಉಳಿದಿರುವಾಗಲೇ ನವನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಲಕಿಯನ್ನು ಸದ್ದಾಂ ಹುಸೇನ್ ಎಂಬಾತ ನಂಬಿಸಿ ಗರ್ಭಿಣಿ ಮಾಡಿದ್ದಾನೆ ಎಂದು ದೂರು ದಾಖಲಾಗಿತ್ತು.