Home » ಅತ್ಯಾಚಾರ ಪ್ರಕರಣ : ಪ್ರಜ್ವಲ್‌ ದೋಷಿ ಎಂದ ಕೋರ್ಟ್
 

ಅತ್ಯಾಚಾರ ಪ್ರಕರಣ : ಪ್ರಜ್ವಲ್‌ ದೋಷಿ ಎಂದ ಕೋರ್ಟ್

by Kundapur Xpress
Spread the love

ಬೆಂಗಳೂರು : ಬೆಂಗಳೂರಿನ ಕೆ.ಆರ್.ನಗರದಲ್ಲಿತಮ್ಮ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ನ್ಯಾ. ಗಜಾನನ ಭಟ್‌ ಭಟ್‌ ಅವರಿದ್ದ ಪೀಠ ಪ್ರಜ್ವಲ್‌ ದೋಷಿ ಎಂದು ತೀರ್ಪು ನೀಡಿದೆ. ತೀರ್ಪು ಪ್ರಕಟಿಸುವ ವೇಳೆ ಪ್ರಜ್ವಲ್‌ ರೇವಣ್ಣ ಕೂಡ ಕೋರ್ಟ್‌ ಹಾಲ್‌ನಲ್ಲಿ ಹಾಜರಿದ್ದರು. ಶಿಕ್ಷೆಯ ಪ್ರಮಾಣ ಶನಿವಾರ ಪ್ರಕಟವಾಗಲಿದೆ. ಕೋರ್ಟ್‌ ದೋಷಿ ಎಂದು ತೀರ್ಪು ನೀಡುವ ವೇಳೆ ಪ್ರಜ್ವಲ್‌ ರೇವಣ್ಣ ಕಣ್ಣೀರಿಟ್ಟಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಕನಿಷ್ಠ 10 ವರ್ಷ, ಗರಿಷ್ಟ ಜೀವಾವಧಿ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.

ಈ ಸಂದರ್ಭದಲ್ಲಿ ಸರ್ಕಾರಿ ಪರ ವಕೀಲ ಎನ್ ಜಗದೀಶ್ ಹಾಗೂ ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ ಅವರು ಹಾಜರಾಗಿದ್ದರು

 

Related Articles

error: Content is protected !!