Home » ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ
 

ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಮೂವರು ಆರೋಪಿಗಳ ಅರೆಸ್ಟ್

by Kundapur Xpress
Spread the love

ಬೆಳಗಾವಿ : ಬೆಳಗಾವಿ ಮೂಲದ ವೈದ್ಯ ವಿದ್ಯಾರ್ಥಿನಿ ಮೇಲೆ ಆಕೆಯ ಸಹಪಾಠಿಗಳೇ ಸಾಮೂಹಿಕ ಅತ್ಯಾಚಾರ ಎಸಗಿದ ಪೈಶಾಚಿಕ ಘಟನೆ ನೆರೆಯ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ಸುಮಾರು 22 ವರ್ಷದ ಈ ನತದೃಷ್ಟ ಎಂಬಿಬಿಎಸ್ ವಿದ್ಯಾರ್ಥಿನಿ ಮೇಲೆ ಇಬ್ಬರು ಸಹಪಾಠಿಗಳು ಹಾಗೂ ಓರ್ವ ಸ್ನೇಹಿತ ಅತ್ಯಾಚಾರ ಎಸಗಿದ್ದಾರೆ.

ಕಳೆದ ಮೇ 18ರಂದು ಮಧ್ಯರಾತ್ರಿ ಸಿನೆಮಾ ನೋಡಲು ಯುವತಿ ತನ್ನ ಸ್ನೇಹಿತರ ಜೊತೆ ತೆರಳಿದ್ದಳು. ನಂತರ ಯುವತಿಯನ್ನು ಖಾಸಗಿ ಫ್ಯಾಟ್‌ ಗೆ ಕರೆದೊಯ್ದ ದುರುಳರು ಯುವತಿಗೆ ಪಾನೀಯದಲ್ಲಿ ಮಾತ್ರೆ ಕೊಟ್ಟು ಪ್ರಜ್ಞೆ ತಪ್ಪಿಸಿದ್ದಾರೆ. ನಂತರ ಮೂವರೂ ಆರೋಪಿಗಳು ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ.

ಪ್ರಜ್ಞೆ ಬಂದ ಬಳಿಕ ವಿದ್ಯಾರ್ಥಿನಿ ಬೆಳಗಾವಿಯ ತಮ್ಮ ಮನೆಯವರಿಗೆ ಘಟನೆ ಕುರಿತು ಮಾಹಿತಿ ನೀಡಿದ್ದು, ಈ ಬಗ್ಗೆ ಸಾಂಗ್ಲಿಯ ವಿಶ್ರಂಬಾಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪುಣೆ, ಸೋಲಾಪುರ ಮತ್ತು ಸಾಂಗ್ಲಿ ಮೂಲದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, . ನ್ಯಾಯಾಲಯ ಮೇ 27ರ ವರೆಗೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ

 

Related Articles

error: Content is protected !!