Home » ಚಾರಣಕ್ಕೆ ಕರೆದೊಯ್ದು ಅತ್ಯಾಚಾರ ಆರೋಪ : ಆರೋಪಿಯ ಬಂಧನ
 

ಚಾರಣಕ್ಕೆ ಕರೆದೊಯ್ದು ಅತ್ಯಾಚಾರ ಆರೋಪ : ಆರೋಪಿಯ ಬಂಧನ

by Kundapur Xpress
Spread the love

ಉಡುಪಿ : ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿ, ನಂತರ ಬೇರೊಬ್ಬ  ಯುವತಿಯನ್ನು ಮದುವೆಯಾಗಲು ಸಿದ್ಧತೆ ನಡೆಸಿದ್ದ ಆರೋಪದಡಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಳಲಗಿರಿ ಗ್ರಾಮದ ನರ್ನಾಡುಗುಡ್ಡೆ, ಲಕ್ಷ್ಮೀನಗರ ನಿವಾಸಿ ಸಂಜಯ್‌ ಕರ್ಕೇರ (28) ಬಂಧಿತ ಆರೋಪಿ.

ಸಂತ್ರಸ್ತೆಯು ಈ ಬಗ್ಗೆ ದೂರು ನೀಡಿದ್ದು, ದೂರಿನಲ್ಲಿ ಆಕೆ ಮತ್ತು ಆರೋಪಿ ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. 2024ರ ಜು. 11ರಂದು ಇಬ್ಬರು ಚಾರಣದ ನೆಪದಲ್ಲಿ ಕಳಸಕ್ಕೆ ತೆರಳಿದ್ದರು. ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಆರೋಪಿ, ತನಗೆ ಅಮಲು ಪದಾರ್ಥ ಬೆರೆಸಿದ ಜ್ಯೂಸ್ ಕುಡಿಸಿದ್ದಾನೆ. ಇದರಿಂದ ತಾನು ಅರೆಪ್ರಜ್ಞಾವಸ್ಥೆಗೆ ತಲುಪಿದ್ದು, ನಂತರ ಆತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.

ಈ ಬಗ್ಗೆ ದೂರು ಕೊಡುತ್ತೇನೆ ಎಂದು ಹೇಳಿದಾಗ ಆರೋಪಿಯು ಮದುವೆಯಾಗುವುದಾಗಿ ನಂಬಿಸಿ ತನ್ನನ್ನು ಶೃಂಗೇರಿಯ ದೇವಾಲಯಕ್ಕೆ ಕರೆದೊಯ್ದು, ಅಲ್ಲಿ ಸಿಂಧೂರವಿಟ್ಟು, ಹೂವಿನ ಹಾರವನ್ನು ಹಾಕಿ, ತಾವು ಮದುವೆಯಾದಂತೆ ಎಂದು ಬಿಂಬಿಸಿದ್ದಾನೆ. ಮುಂದೆ ತನ್ನ ಮನೆಯವರನ್ನು ಒಪ್ಪಿಸಿ ಔಪಚಾರಿಕವಾಗಿ ಮದುವೆಯಾಗುವುದಾಗಿ ಆತ ಭರವಸೆ ನೀಡಿದ್ದ. ಆ ಬಳಿಕ ಹಲವಾರು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಉಡುಪಿಯ ಮಹಿಳಾ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

 

Related Articles

error: Content is protected !!