ಬಜಪೆ : ಹೆತ್ತ ತಾಯಿಯನ್ನು ಕೈಕಾಲು ಕಟ್ಟಿ ಅತ್ಯಾಚಾರ ಗೈದು ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿದ ವಿಕೃತಕಾಮಿ ಆರೋಪಿ ಮಗನನ್ನು ಬಜಪೆ ಪೊಲೀಸರು ಬಂಧಿಸಿ ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ
ಕಟೀಲು ಸಮೀಪದ ಕೊಂಡೆಮೂಲ ನಿವಾಸಿ ರತ್ನ (56ವರ್ಷ) ಎಂಬವರನ್ನು ಅವರ ಸ್ವಂತ ಮಗನೇ ರವಿರಾಜ್ ಶೆಟ್ಟಿ (33ವರ್ಷ) ಎಂಬಾತ ಅಕ್ಟೋಬರ್ 26ರಂದು ಗುರುವಾರ ರಾತ್ರಿ ಕೊಲೆಗೈದು ಮನೆಗೆ ಬೀಗ ಹಾಕಿ ಕಿನ್ನಿಗೋಳಿಯ ವಸತಿಗೃಹದಲ್ಲಿ ಉಳಿದುಕೊಂಡಿದ್ದ ವಿಷಯ ತಿಳಿದ ಪೊಲೀಸರು ಈತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ತಾಯಿಯನ್ನು ನಾನೇ ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ ಆರೋಪಿಯು ಗಾಂಜಾ ವ್ಯಸನಿಯಾಗಿದ್ದು ಅಮಲಿನಲ್ಲಿ ಅತ್ಯಾಚಾರ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ