Home ಅಪರಾಧಅನ್ನ ಭಾಗ್ಯ ಯೋಜನೆಯ ಪಡಿತರ ಅಕ್ಕಿ ವಶ

ಅನ್ನ ಭಾಗ್ಯ ಯೋಜನೆಯ ಪಡಿತರ ಅಕ್ಕಿ ವಶ

by Kundapur Xpress

ಕೋಟ: ಕುಂದಾಪುರ ತಾಲೂಕು ಮೊಳಹಳ್ಳಿ ಗ್ರಾಮದ ಮಾಸ್ತಿಕಟ್ಟೆಯ ಉದಯ ಎಂಬುವವರ ಮನೆಯ ಬಳಿ ಇರುವ ಗೋಡೌನ್ ನಲ್ಲಿ ಅನ್ನ ಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಕಾನೂನು ಬಾಹಿರವಾಗಿ ದಾಸ್ತಾನು ಇರುವ ಸ್ಥಳಕ್ಕೆ ಕೋಟ ಪೊಲೀಸ್ ಉಪ ನಿರೀಕ್ಷಕರಾದ ಪ್ರವೀಣ್ ಕುಮಾರ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ 8 ಕ್ವಿಂಟಾಲ್‌ಗೂ ಅಧಿಕ ಅಕ್ಕಿ ವಶಪಡಿಸಿಕೊಂಡ ಘಟನೆ ನಡೆದಿದೆ.

ಕೋಟ ಪೊಲೀಸರು ದಾಳಿ ನಡೆಸಿ ಗೋಡೌನೊಳಗೆ ಬಿಳಿ ಪಾಲಿಥೀನ್ ಚೀಲದಲ್ಲಿ ತುಂಬಿದ್ದ ಒಟ್ಟು 8 ಕ್ವಿಂಟಾಲ್ 45 ಕೆ ಜಿ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

Related Articles