ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಹೊಸ ತಿರುವುಗಳನ್ನು ಪಡೆಯುತ್ತಿದ್ದು, ಹತ್ಯೆಯಾಗಿದ್ದ ರೇಣುಕಾ ಸ್ವಾಮಿ ಮರಣೋತ್ತರ ಪರೀಕ್ಷಾ ವರದಿ ಪೊಲೀಸರ ಕೈ ಸೇರಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಮತ್ತಷ್ಟು ಚುರುಕುಗೊಳಿಸಿದ್ದಾರೆ.
ನಟ ದರ್ಶನ್ ಮತ್ತು ಗ್ಯಾಂಗ್ನವರಿಂದ ಬರ್ಬರವಾಗಿ ಹತ್ಯೆಯಾಗಿರುವುದು ವರದಿಯಲ್ಲಿ ನಮೂದಿಸಲಾಗಿದೆ. ನಗರದ ಬೌರಿಂಗ್ ಆಸ್ಪತ್ರೆಯ ವೈದ್ಯರು ಮರಣೋತ್ತರ ಪರೀಕ್ಷೆ ನಂತರ ವರದಿಯನ್ನು ಕಾಮಾಕ್ಷಿ ಠಾಣೆ ಪೊಲೀಸರಿಗೆ ನೀಡಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲ ಆಯಾಮಗಳಲ್ಲಿಯೂ ತನಿಖೆ ಕೈಗೊಂಡಿದ್ದಾರೆ.