ಭಟ್ಕಳ : ವಿದ್ಯಾರ್ಥಿಗಳನ್ನು ಒಯ್ಯುತ್ತಿದ್ದ ಮಿನಿ ಬಸ್ಸೊಂದು ಬೆಂಕಿ ಹೊತ್ತಿಕೊಂಡ ಘಟನೆ ತಾಲೂಕಿನ ವೆಂಕಟಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.
ವಾಹನ ಭಟ್ಕಳದಿಂದ ಶಿರಾಲಿ ಕಡೆ ತೆರಳುತಿತ್ತು ಬೆಂಕಿ ಹೊತ್ತಿಕೊಂಡ ಸಂದರ್ಭದಲ್ಲಿ ವಾಹನದಲ್ಲಿ ಇಬ್ಬರು ವಿದ್ಯಾರ್ಥಿಗಳಿದ್ದರೆಂದು ತಿಳಿದುಬಂದಿದೆ. ಭಟ್ಕಳ ತಾಲೂಕಿನ ಹೆಬಳೆಯಲ್ಲಿರುವ ನ್ಯೂ ಶಮ್ಸ್ ಶಾಲೆಯ ವಾಹನ ಇದಾಗಿದ್ದು, ವಾಹನದಲ್ಲಿದ್ದವರು ಅದೃಷ್ಟವಶಾತ್ ಬಚಾವ್ ಆಗಿದ್ದಾರೆ.
ಶಾಲಾ ವಾಹನಕ್ಕೆ ಬೆಂಕಿ ಬಿದ್ದ ಸುದ್ದಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ವಾಹನದೊಳಗೆ ಶಾರ್ಟ್ ಉಂಟಾಗಿದ್ದರಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಶಂಕಿಸಲಾಗಿದ್ದು ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ