275
ಕುಂದಾಪುರ : ಬಚ್ಚಲು ಮನೆಯಲ್ಲಿ ನೀರು ಬಿಸಿ ಮಾಡಲು ಬೆಂಕಿ ಹಾಕುವ ಸಮಯ ಆಕಸ್ಮಿಕ ಬೆಂಕಿ ತಗುಲಿ ಸುಟ್ಟ ಗಾಯಗಳಿಂದ ಮಹಿಳೆ ಮೃತಪಟ್ಟಿದ್ದಾರೆ ಬೈಂದೂರಿನ ಮಯ್ಯಾಡಿಯ ನಿವಾಸಿ ವನಿತಾ (46) ಮೃತಪಟ್ಟವರು.
ಜೂ.2ರಂದು ಬೆಳಗ್ಗೆ ಘಟನೆ ಸಂಭವಿಸಿದ್ದು, ಅವರನ್ನು ಚಿಕಿತ್ಸೆಯ ಬಗ್ಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

