74
ಮುಲ್ಕಿ : ಇನಸ್ಟಾಗ್ರಾಮ್ ಮೂಲಕ ಪರಿಚಯವಾಗಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಇಬ್ಬರು ಯುವಕರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಉಡುಪಿ ಜಿಲ್ಲೆಯ ಬಡಗುಬೆಟ್ಟು ನಿವಾಸಿ ಬಸ್ಸು ನಿರ್ವಾಹಕ ದೀಪಕ್ (19) ಮತ್ತು ಆತನ ಸ್ನೇಹಿತ ಅತ್ರಾಡಿ ಪರ್ಕಳ ಭಟ್ರಪಲ್ಲೆ ನಿವಾಸಿ ನವೀನ್ ಶೆಟ್ಟಿ (21) ಎಂದು ಗುರುತಿಸಲಾಗಿದೆ.
ಆರೋಪಿಗಳಿಗೆ ಬಾಲಕಿ ಇನಸ್ಟಾಗ್ರಾಮ್ ಮೂಲಕ ಪರಿಚಯವಾಗಿದ್ದು ಅದರಂತೆ ಆರೋಪಿಗಳು ಜು.19 ರಂದು ಮುಲ್ಕಿ ಸಮೀಪದ ಬಪ್ಪನಾಡಿನಿಂದ ಸ್ಕೂಟರ್‌ನಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಕೊಂಡು ಉಡುಪಿಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಗಳ ವಿರುದ್ದ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಇಬ್ಬರು ಆರೋಪಿಗಳನ್ನು ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

