ತುಮಕೂರು : ದೂರು ನೀಡಲು ಬಂದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಂಧನ ಹಿನ್ನೆಲೆಯಲ್ಲೇ ಅವರನ್ನು ಅಮಾನತುಗೊಳಿಸಲಾಗಿದೆ
ಏನಿದು ಘಟನೆ ?
ಪಾವಗಡದಿಂದ ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಬಂದ ಮಹಿಳೆಯನ್ನು ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅವರು ತನ್ನ ಕಚೇರಿಯಲ್ಲಿನ ಶೌಚಾಲಯಕ್ಕೆ ಕರೆದುಕೊಂಡು ಅಸಭ್ಯವಾಗಿ ವರ್ತಿಸಿದ್ದರು. ಇದನ್ನು ಕಿಟಕಿಯ ಮೂಲಕ ವ್ಯಕ್ತಿಯೊಬ್ಬ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಕ್ಕೆ ಹರಿಯ ಬಿಟ್ಟಿದ್ದು ಇದೀಗ ವಿಡಿಯೋ ವೈರೆಲ್ ಆಗಿತ್ತು. ವೈರಲ್ ಆದ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ಪಿ ಅಶೋಕ್ ಅವರು ಕಾನೂನು ಕ್ರಮ ಕೈಗೊಳ್ಳಲಾಗುವುದು ಹೇಳಿದ್ದರು.
ಈ ಸಂಬಂಧ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಈ ಘಟನೆ ಬಗ್ಗೆ ವರದಿ ನೀಡಿದ್ದರು. ಈ ಬಗ್ಗೆ ತನಿಖೆ ನಡೆಸಿ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಅಮಾನತ್ತಾದ ಬೆನ್ನಲ್ಲೇ ಪೊಲೀಸರು. ಡಿವೈಎಸ್ಪಿಯನ್ನು ಬಂಧಿಸಿ ಮಧುಗಿರಿ ಪೊಲೀಸ್ ಠಾಣೆಗೆ ಕರೆ ತಂದಿದ್ದಾರೆ. ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಂತ್ರಸ್ಥ ಮಹಿಳೆಗೆ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ