ಕುಂದಾಪುರ : ಹೆಂಗವಳ್ಳಿ ಗ್ರಾಮದ ತೊಂಬತ್ತುವಿನ ಖಾಸಗಿ ರೆಸಾರ್ಟ್ ಟಿನ್ ಟಾನ್ ಅಡ್ವೆಂಚರ್ಸ್ಗೆ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರ ಮಗುವೊಂದು ಸ್ವಿಮಿಂಗ್ ಪೂಲ್ನಲ್ಲಿ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ ಮೃತಪಟ್ಟ ಬಾಲಕ ಹೂಡೆಯ ದಾರುಸ್ಸಲಾಮ್ ಇಂಗ್ಲಿಷ್ ಮೀಡಿಯಂ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ
ಮನೆ ಮಂದಿಯೊಂದಿಗೆ ಟಿನ್ ಟಾನ್ ಎಡ್ವೆಂಚರ್ಸ್’ ರೆಸಾರ್ಟ್ಗೆ ಹೋಗಿದ್ದ ಸಂದರ್ಭದಲ್ಲಿ ಸ್ವಿಮಿಂಗ್ ಫುಲ್’ನ ನೀರಿಗೆ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತ ಕೊನೆಯುಸಿರೆಳೆದಿದ್ದಾನೆ.
ಉಮ್ಮರ್ ನೌಕುರ್ (10) ಮಗುವಿನ ಸಾವಿಗೆ ಟಿನ್ ಟಾನ್ ಎಡ್ವೆಂಚರ್ಸ್ ರೆಸಾರ್ಟ್ ಅವರ ನಿರ್ಲಕ್ಷ್ಯವೇ ಕಾರಣವೆಂದು ದೂರಿನಲ್ಲಿ ಆರೋಪಿಸಲಾಗಿದೆ. ಲೈಫ್ ಜಾಕೆಟ್, ಲೈಫ್ ಗಾರ್ಡ್ ಇನ್ನಿತರ ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಈ ದುರ್ಘಟನೆ ಸಂಭವಿಸಿದೆಯೆಂದು ದೂರಿನಲ್ಲಿ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ