ಕುಂದಾಪುರ : ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಶಾ ಎಸ್ (52ವರ್ಷ) ಬುಧವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿಯಾಗಿದ್ದ ಆಶಾ ಅವರು ಬುಧವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದರು ಬಳಿಕ ಅಪರಾಹ್ನ ಕಚೇರಿಯಿಂದ ಯಾರಿಗೂ ತಿಳಿಸದೆ ನೇರವಾಗಿ ಮನೆಗೆ ಹೋಗಿ, ಮಹಡಿಯ ಕೋಣೆಯಲ್ಲಿ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬ್ಯಾಂಕ್ ಮೂಲಗಳ ಪ್ರಕಾರ ಲಾಕರ್ ನಲ್ಲಿಟ್ಟಿದ್ದ ಚಿನ್ನ ಕಂಡು ಬರದ ಹಿನ್ನೆಲೆ ಲಾಕರ್ ನಿಭಾಯಿಸುತ್ತಿದ್ದ ಆಶಾ ಅವರನ್ನು ಪ್ರಶ್ನಿಸಲಾಗಿ, ಇದರಿಂದ ಅವಮಾನಗೊಳ್ಳುವ ಭೀತಿಯಿಂದ ಆತ್ಯಹತ್ಯೆಗೆ ಶರಣಾಗಿರಬಹುದು ಎನ್ನಲಾಗಿದೆ.