ಕುಂದಾಪುರ: ಸ್ಥಳೀಯ ಪೋಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಮ ಗೌಡ ಎಂಬವರು ಹೊನ್ನಾವರದ ಬೀಚ್ ಸಮೀಪದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ ಕಳೆದ 5 ವರ್ಷದಿಂದ ಕುಂದಾಪುರ ಠಾಣೆಯಲ್ಲಿ ಕಾನ್ ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಉತ್ತಮ ವಾಲಿಬಾಲ್ ಪಟುವಾಗಿದ್ದರು ಕಳೆದ 3-4ದಿನಗಳಿಂದ ಮೇಲಾಧಿಕಾರಿಗಳಿಗೆ ಮಾಹಿತಿ ನೀಡದೇ ಕರ್ತವ್ಯಕ್ಕೆ ಗೈರುಹಾಜರಾಗಿದ್ದರು
ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಇಲಾಖೆ ವತಿಯಿಂದ ಅವರಿಗಾಗಿ ಹುಡುಕಾಟ ನಡೆಯುತಿತ್ತು ಮಂಗಳವಾರ ಹೊನ್ನಾವರ ತಾಲೂಕಿನ ಕಾಸರಕೋಡು ಬೀಚ್ ಸಮೀಪದಲ್ಲಿ ಇವರ ಮೃತದೇಹ ಪತ್ತೆಯಾಗಿದೆ ಆನ್ ಲೈನ್ ಬೆಟ್ಟಿಂಗ್ ನಲ್ಲಿ ನಷ್ಟ ಹೊಂದಿ ಸಾಕಷ್ಟು ಸಾಲ ಮಾಡಿಕೊಂಡಿರುವುದೇ ಅತ್ಮಹತ್ಯೆಗೆ ಕಾರಣ ಎನ್ನುವ ಮಾತುಗಳು ಕೇಳಿ ಬಂದಿದೆ