Home » ನಿಶ್ಚಿತಾರ್ಥದ ಯುವತಿ ನೇಣು ಬಿಗಿದು ಆತ್ಮಹತ್ಯೆ
 

ನಿಶ್ಚಿತಾರ್ಥದ ಯುವತಿ ನೇಣು ಬಿಗಿದು ಆತ್ಮಹತ್ಯೆ

by Kundapur Xpress
Spread the love

ಉಡುಪಿ : ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು ಚಿಕಿತ್ಸೆ ಫಲಿಸದೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಯುವತಿ.

ಮನೆಯ ರೂಮ್ ನಲ್ಲಿ ಕುತ್ತಿಗೆಗೆ ಶಾಲು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಬಳಿಕ ಮನೆಯವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ  ಕೊನೆಯುಸಿರೆಳೆದಿದ್ದಾಳೆ ಕೀರ್ತನಾ ಅವರು ಮಣಿಪುರದ ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಮೂರು ವರ್ಷಗಳಿಂದ ಕೆಲಸ ಮಾಡುತಿದ್ದಳು ಇವಳಿಗೆ  ಒಂದೂವರೆ ತಿಂಗಳ ಹಿಂದೆ ನಿಶ್ಚಿತಾರ್ಥ  ಆಗಿತ್ತು 

 

Related Articles

error: Content is protected !!