ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ನರಿಮೊಗರು ಕೂಡುರಸ್ತೆಯ ಕೇಶವ ಜೋಗಿ ಎಂಬವರ ಪುತ್ರಿ ಪುತ್ತೂರಿನ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಿತಾ(17) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವಳು
ದೀಕ್ಷಿತಾ ಅವರು ಜ.9 ರಂದು ಕಾಲೇಜಿಗೆ ಹೋಗಿದ್ದು ಅಲ್ಲಿಂದ ಸಂಜೆ ವಾಪಸ್ಸು ಮನೆಗೆ ಬಂದಿದ್ದಾರೆ. ಬಳಿಕ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಪುತ್ತೂರು ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.