ಬೆಂಗಳೂರು : ಕನ್ನಡದ ‘ಮಠ’, ‘ಎದ್ದೇಳು ಮಂಜುನಾಥ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ದಾಸನಪುರ ಹೋಬಳಿ ಹುಸ್ಕೂರು ರಸ್ತೆಯ ಟಾಟಾ ನ್ಯೂ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದುಕೊಂಡು ಗುರುಪ್ರಸಾದ್ (52ವರ್ಷ) ಆತ್ಮಹತ್ಯೆ ಮಾಡಿಕೊಂಡಿದ್ದು ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಭಾನುವಾರ ಬೆಳಗ್ಗೆ ಫ್ಲ್ಯಾಟಿನಿಂದ ದುರ್ವಾಸನೆ ಬರುತ್ತಿತ್ತು. ಈ ಬಗ್ಗೆ ನೆರೆಹೊರೆಯವರು ನೀಡಿದ ಮಾಹಿತಿ ಮೇರೆಗೆ ಎರಡನೇ ಪತ್ನಿ ಸುಮಿತ್ರಾ ತವರು ಮನೆಯಿಂದ ಫ್ಲ್ಯಾಟ್ ಬಳಿ ಬಂದು ಸ್ಥಳೀಯರು ಹಾಗೂ ಪೊಲೀಸರ ನೆರವಿನಿಂದ ಬಾಗಿಲು ಲಾಕ್ ಮುರಿದು ಒಳಹೋಗಿ ನೋಡಿದಾಗ ಕಬ್ಬಿಣದ ಕೊಕ್ಕೆಗೆ ಹಗ್ಗದಿಂದ ನೇಣು ಬಿಗಿದು ಕೊಳೆತ ಸ್ಥಿತಿಯಲ್ಲಿ ನಿರ್ದೇಶಕ ಗುರುಪ್ರಸಾದ್ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
.ಕುಟುಂಬಸ್ಥರ ಸಮಕ್ಷಮದಲ್ಲಿ ಪೊಲೀಸರು ಮೃತದೇಹವನ್ನು ಕೆಳಗಿಳಿಸಿ ವಿಕ್ಟೋರಿಯಾ ಆಸತ್ರೆಗೆ ಸಾಗಿಸಿದರು. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಈ ವೇಳೆ ನಟ ದುನಿಯಾ ವಿಜಯ್, ಡಾಲಿ ಧನಂ ಜಯ್, ತಬಲಾ ನಾಣಿ ಸೇರಿ ಚಿತ್ರರಂಗದ ಹಲವರು ಆಸ್ಪತ್ರೆಗೆ ಆಗಮಿಸಿದ್ದರು