Home » ಸುಹಾಸ್‌ ಶೆಟ್ಟಿ ಕೊಲೆ : 4 ಪೊಲೀಸ್‌ ತಂಡ ರಚನೆ
 

ಸುಹಾಸ್‌ ಶೆಟ್ಟಿ ಕೊಲೆ : 4 ಪೊಲೀಸ್‌ ತಂಡ ರಚನೆ

by Kundapur Xpress
Spread the love

ಮಂಗಳೂರು : ದುಷ್ಕರ್ಮಿಗಳಿಂದ ಕೊಲೆಗೀಡಾದ ಸುಹಾಸ್ ಶೆಟ್ಟಿ ಹಂತಕರ ಬಂಧನಕ್ಕೆ ಮೂರು ನಾಲ್ಕು ಪೊಲೀಸ್ ತಂಡ ರಚಿಸಲಾಗಿದೆ. ಅಲ್ಲದೆ ಸ್ಥಳೀಯ ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಘಟನಾ ಸ್ಥಳಕ್ಕೆ ಆಗಮಿಸಿದ ನಗರ ಪೊಲೀಸ್ ಕಮಿಷನರ್‌ ಅನುಪಮ ಅಗರವಾಲ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇದೇ ವೇಳೆ ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದಂತೆ ಕಟ್ಟುನಿಟ್ಟಿನ ಬಂದೋಬಸ್ತ್ ಕೈಗೊಳ್ಳುವಂತೆ ರಾಜ್ಯ ಪೋಲಿಸ್ ಮಹಾ ನಿರ್ದೇಶಕರು ಮಂಗಳೂರು ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಮಾಜಿ ಸಂಸದ ನಳಿನ್ ಕುಮಾರ್‌ಕಟೀಲ್, ಶಾಸಕರಾದ ಡಾ. ಭರತ್ ಶೆಟ್ಟಿ ಹಾಗೂ ವೇದವ್ಯಾಸ ಕಾಮತ್ ಇವರು ಘಟನೆಯನ್ನು ಖಂಡಿಸಿದ್ದು, ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಮಾತ್ರವಲ್ಲ ಕರಾವಳಿಯಲ್ಲಿ ಮುಂದೆ ಇಂತಹ ಯಾವುದೇ ಶಾಂತಿ ಕದಡುವ ಘಟನೆಗಳಿಗೆ ಆಸ್ಪದ ನೀಡಬಾರದು ಎಂದು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.

 

Related Articles

error: Content is protected !!