Home » 8 ಮಂದಿ ಆರೋಪಿಗಳು ಎನ್‌ ಐ ಎ ವಶಕ್ಕೆ
 

8 ಮಂದಿ ಆರೋಪಿಗಳು ಎನ್‌ ಐ ಎ ವಶಕ್ಕೆ

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ

by Kundapur Xpress
Spread the love

ಮಂಗಳೂರು : ಮಂಗಳೂರು ಹೊರವಲಯದ ಬಜಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಎಂಟು ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್‌ ಐ ಎ) ಕಸ್ಟಡಿಗೆ ನೀಡಿದೆ. 

ಪ್ರಕರಣ ಸಂಬಂಧ ಎನ್‌ ಐ ಎ ಪ್ರತ್ಯೇಕವಾಗಿ ಎಫ್‌ಐಆ‌ರ್ ದಾಖಲಿಸಿ ತನಿಖೆ ನಡೆಸುತ್ತಿದೆ. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಎನ್‌ಐಎ ಎಸ್‌ಪಿಪಿ ಪ್ರಸನ್ನ ಕುಮಾರ್‌ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ಬೆಂಗಳೂರಿನ 50ನೇ ಸಿಸಿಎಚ್ ನ್ಯಾಯಾಲಯ ಜುಲೈ 1ರ ವರೆಗೆ ಆರೋಪಿಗಳನ್ನು ಎನ್‌ಐಎ ವಶಕ್ಕೆ ನೀಡಿ ಆದೇಶ ಹೊರಡಿಸಿದೆ

ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಅವರಿಗೆ ಮನವಿ ಸಲ್ಲಿಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು, ಸಂಸದರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು.

2025 ಮೇ 1 ರಂದು ನಡೆದ ಸುಹಾಸ್ ಶೆಟ್ಟಿ ಹತ್ಯೆಗೆ ಮೂರು ತಿಂಗಳ ಹಿಂದೆಯೇ ಸಂಚು ಹೂಡಲಾಗಿತ್ತು. ಜನವರಿಯಲ್ಲೇ ಸಫ್ಘಾನ್ ತಂಡಕ್ಕೆ ಫಾಜಿಲ್ (ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿ ಹತ್ಯೆಗೊಳಗಾಗಿದ್ದ ಯುವಕ) ಸಹೋದರ ಆದಿಲ್ 3 ಲಕ್ಷ ರು. ಹಣ ಕೊಟ್ಟಿದ್ದ.

ಕೃತ್ಯಕ್ಕಾಗಿ ಒಂದು ಪಿಕ್ ಅಪ್ ವಾಹನ, ಸ್ವಿಫ್ಟ್ ಕಾರ್‌ ಬಳಕೆ ಮಾಡಿದ್ದ. ಆಕಸ್ಮಾತ್ ಸುಹಾಸ್‌ ಶೆಟ್ಟಿ ತಪ್ಪಿಸಿಕೊಂಡರೆ ಪ್ಲಾನ್ ‘ಬಿ’ ಸಿದ್ಧಮಾಡಿಕೊಳ್ಳಲಾಗಿತ್ತು.

 

Related Articles

error: Content is protected !!