250
ಮಂಗಳೂರು: ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ ವಿವೇಕಾನಂದ ನಗರ ఎంబల్లి ಜು.6 ರಂದು ಮನೆಯೊಂದರಿಂದ ಚಿನ್ನಾಭರಣ ಕಳವು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.
ವೆಂಕಟೇಶ್ ಅಲಿಯಾಸ್ ವೆಂಕಿ ( 21), ಸಾಗರ್ ( 21), ರಂಜಿತ್ (20) ಬಂಧಿತ ಆರೋಪಿಗಳು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಗಂಗೌಡನಹಳ್ಳಿ ಎಂಬಲ್ಲಿ ಆರೋಪಿಗಳನ್ನುವಶಕ್ಕೆ ಪಡೆಯಲಾಗಿದೆ.
ಪ್ರಕರಣದಲ್ಲಿ ಸುಮಾರು 80 ಗ್ರಾಂ ಬಂಗಾರದ ಆಭರಣ ಕಳವಾಗಿದ್ದು ಆರೋಪಿಗಳಿಂದ ಕಳವು ಮಾಡಿದ ಸುಮಾರು 4,64,750 ರೂ ಮೌಲ್ಯದ ಚಿನ್ನಾಭರಣಗಳನ್ನು ಮತ್ತು ಕೃತ್ಯಕ್ಕೆ ಬಳಸಿದ ಸ್ಕೂಟರ್‌ನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ

