ಕಾರ್ಕಳ : ಕೆರ್ವಾಶೆ ಗ್ರಾಮದ ಬಂಗ್ಲೆಗುಡ್ಡೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಚೇರಿಯ ಬೀಗ ಮುರಿದು ಒಳನುಗ್ಗಿದ ಕಳ್ಳರು 38 ಸಾವಿರ ರೂ. ಮೌಲ್ಯದ ಲ್ಯಾಪ್ಟಾಪ್ ಮತ್ತು ಡ್ರಾವರ್‌ನಲ್ಲಿದ್ದ 1,700 ರೂ. ಕಳವು ಮಾಡಿರುವ ಘಟನೆ ನಡೆದಿದೆ. ಶಿಕ್ಷಕಿ ಪ್ರಮೀಳಾರವರು ನೀಡಿದ ದೂರಿನಂತೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿದೆ.