173
ಕುಂದಾಪುರ : ಯಾವುದೇ ಪರವಾನಿಗೆ ಇಲ್ಲದೇ ಕೆಂಪು ಕಲ್ಲನ್ನು ಕಳವು ಮಾಡಿ ಸಾಗಾಟ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಕುಂದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕ ನಂಜಾ ನಾಯ್ ಅವರು ಸಿಬ್ಬಂದಿಗಳೊಂದಿಗೆ ಕುಂದಾಪುರ ತಾಲೂಕು ಗೋಪಾಡಿ ಗ್ರಾಮದ ಶಾಂತಿನಗರ ಜಂಕ್ಷನ್‌ನಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ ವಕ್ತಾಡಿ ಕಡೆಯಿಂದ ಬರುತ್ತಿದ್ದ ಮಿನಿ ಟಿಪ್ಪರನ್ನು ಪರಿಶೀಲಿಸಿದಾಗ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ಟಿಪ್ಪರ್‌ನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 5 ಸಾವಿರ ರೂ. ಮೌಲ್ಯದ ಕೆಂಪು ಕಲ್ಲುಗಳನ್ನು ಮತ್ತು ಟಿಪರ್‌ನ್ನು ವಶಪಡಿಸಿಕೊಳ್ಳಲಾಗಿದೆ.
ಬ್ರಹ್ಮಾವರದ ಅಜ್ಜಾಡಿ ಗ್ರಾಮದ ಸಚ್ಚಿದಾನಂದ (31) ಅವರನ್ನು ಬಂಧಿಸಲಾಗಿದೆ. ಮಂದrftiy ಮರಿಯ ಪೂಜಾರಿ. ಎಂಬವರ ಮನೆಯ ಅಂಗಳದಿಂದ ಸುಮಾರು 200 ಕೆಂಪು ಕಲ್ಲುಗಳನ್ನು ತುಂಬಿಸಿಕೊಂಡು ಯಾವುದೇ ಪರವಾನಿಗೆ ಇಲ್ಲದೇ ಕಳವು ಮಾಡಿ ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

