ಉಡುಪಿ : ಉಡುಪಿಯ ಮನೆಯೊಂದರಲ್ಲಿ ಹೋಮ್ ನರ್ಸ್ ಆಗಿ ಕೆಲಸಕ್ಕೆ ಸೇರಿದ ಕೆಲವೇ ದಿನಗಳಲ್ಲಿ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನ ಹಾಗೂ ವಜ್ರಾಭರಣ ಕಳ್ಳತನಗೈದು ಪರಾರಿಯಾಗಿದ್ದ ಆರೋಪಿಯನ್ನು ಉಡುಪಿ ನಗರ ಠಾಣಾ ಪೊಲೀಸರು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ
ಕೊಪ್ಪಳದ, ಕುಷ್ಟಗಿ ತಾಲೂಕಿನ ಸಿದ್ದಪ್ಪ ಕೆ. ಕೊಡ್ಲಿ (23 ವರ್ಷ) ಬಂಧಿತ ಆರೋಪಿ ಬಂಧಿತ ಆರೋಪಿಯಿಂದ 30,00,000/- ಮೌಲ್ಯದ 374.45 ಗ್ರಾಮ್ಸ್ ತೂಕದ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳನ್ನು ಸ್ವಾಧೀನಪಡಿಸಿಕೊಂಡು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ
ಕಾರ್ಯಾಚರಣೆಯಲ್ಲಿಉಡುಪಿ ನಗರ ಠಾಣೆ ಹಾಗೂ ಉಡುಪಿ ಸೆನ್ ಪೊಲೀಸ್ ಠಾಣೆಯ ನಿರೀಕ್ಷಕರು ಉಪನಿರಿಕ್ಷಕರು ಮತ್ತು ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು