105
ಮುಲ್ಕಿ : ಅತಿಕಾರಿಬೆಟ್ಟು ಗ್ರಾಮದ ಮಟ್ಟು ಮೂಲಕ ಉಡುಪಿ ಜಿಲ್ಲೆಯ ಹೆಜಮಾಡಿ ಕಡೆಗೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಮೂರು ಟಿಪ್ಪರ್ ಹಾಗೂ ಮರಳನ್ನು ಮುಲ್ಕಿ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮುಲ್ಕಿ ಕಡೆಯಿಂದ ಮಟ್ಟು ಮೂಲಕ ಮೂರು ಟಿಪ್ಪರ್ ಗಳಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದ್ದು ಮಾಹಿತಿ ತಿಳಿದ ಮುಲ್ಕಿ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಅತಿಕಾರಿಬೆಟ್ಟು ಗ್ರಾಮದ ಮಟ್ಟು ಕೋರ್ದಬ್ಬು ದೈವಸ್ಥಾನದ ಬಳಿ ಅಕ್ರಮ ಮರಳು ಸಾಗಾಟದ ಟಿಪ್ಪರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂದರ್ಭ ಟಿಪ್ಪರ್ ಚಾಲಕರು ಸ್ಥಳದಿಂದ ಪರಾರಿಯಾಗಿದ್ದಾರೆ. ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

