Home » ಫಾಚ್ರ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್
 

ಫಾಚ್ರ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್

ವಾರ್ಷಿಕೋತ್ಸವ ಸಮಾರಂಭ

by Kundapur Xpress
Spread the love

ಕೋಟ :  ಫಾಚ್ರ್ಯೂನ್ ಅಕಾಡೆಮಿಕ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಇದರ ಆಡಳಿತಕೊಳಪಟ್ಟ ಫಾಚ್ರ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಹಾಗೂ ಬಿ.ಡಿ. ಶೆಟ್ಟಿ ಕಾಲೇಜ್ ಮಾಬುಕಳ ಇದರ ವಾರ್ಷಿಕೋತ್ಸವ ಸಮಾರಂಭವು ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫಾಚ್ರ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್, ಬ್ರಹ್ಮಾವರ ಅಧ್ಯಕ್ಷ ಡಾ| ದೈವಿಕ್ ಟಿ. ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಪ್ರಾವೀಣ್ಯತ ಪ್ರಶಸ್ತಿಯನ್ನು ವಿತರಿಸಿ, ವಿದ್ಯಾರ್ಥಿಗಳಿಗೆ ಮುಂದಿನ ಜೀವನದ ವ್ಯಕ್ತಿತ್ವದ ಬಗೆ ಮಾರ್ಗದರ್ಶನ ನೀಡಿದರು.
ಉಡುಪಿ ಪೂರ್ಣಪ್ರಜ್ಞಾ ಕಾಲೇಜು, ನಿವೃತ್ತ ಪ್ರಾಂಶುಪಾಲ ಡಾ| ಬಿ. ಜಗದೀಶ್ ಶೆಟ್ಟಿ, ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ವಿವೇಕಾನಂದರ ಆದರ್ಶ ತತ್ವಗಳನ್ನು ಹಾಗೂ ಮೌಲ್ಯಗಳನ್ನು ಅಳವಡಿಸಿಕೊಂಡು, ಸಮಾಜದಲ್ಲಿ ಪ್ರಾಮಾಣಿಕ ವ್ಯಕ್ತಿಯಾಗಿ ದೇಶದ ಸತ್ಪ್ರಜೆಯಾಗಬೇಕು ಎಂದು ಅನೇಕ ಉದಾಹರಣೆಯೊಂದಿಗೆ ಸಲಹೆ ನೀಡಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಚೇರ್‍ಮ್ಯಾನ್‍ರಾದ ಶ್ರೀ ತಾರನಾಥ್ ಶೆಟ್ಟಿ ಇವರು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.
ಸಮಾರಂಭದ ಮುಖ್ಯ ಅಥಿತಿಯಾಗಿ ಚೇತನಾ ಪ್ರೌಢಶಾಲೆ, ಹಂಗಾರಕಟ್ಟೆ ಇದರ ಮುಖ್ಯೋಪಾಧ್ಯಾಯನಿ ಕಲ್ಪನ ಶೆಟ್ಟಿ ,ವಿದ್ಯಾರ್ಥಿ ನಾಯಕರಾದ ಕೋಟೇಶ್ ಹಾಗೂ ಎಂ.ವಿ. ಹರಿಕೃಷ್ಣ ಉಪಸ್ಥಿತರಿದ್ದರು.
ಉಪನ್ಯಾಸಕರಾದ ಕುಮಾರಿ ಅಮಿಷಾ ಸ್ವಾಗತಿಸಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸ್ಮಿತಾಮೋಲ್ ಈ.ಎಂ ಕಾಲೇಜಿನ ವಾರ್ಷಿಕ ವರದಿಯನ್ನು ವಾಚಿಸಿದರು. ಹಾಗೆಯೇ ಬಹುಮಾನ ವಿಜೇತರ ವಿವರವನ್ನು ಉಪನ್ಯಾಸಕಿ ಅನುರಾಧ, ಕುಮಾರಿ ಅಂಬಿಕಾ, ಹಾಗೂ ಕುಮಾರಿ ಪ್ರೀತಿಕಾ ವಾಚಿಸಿದರು. ಕಾರ್ಯಕ್ರಮವನ್ನು ಉಪನ್ಯಾಸಕಿ ವೀಣಾ ನಿರೂಪಿಸಿ, ಉಪನ್ಯಾಸಕರಾದ ಸುಕುಮಾರ್ ಶೆಟ್ಟಿಗಾರ್ ವಂದಿಸಿದರು

   

Related Articles

error: Content is protected !!