Home » ಡಾ.ಚೇತನ್ ಶೆಟ್ಟಿ ಕೋವಾಡಿ ಅವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ
 

ಡಾ.ಚೇತನ್ ಶೆಟ್ಟಿ ಕೋವಾಡಿ ಅವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ

by Kundapur Xpress
Spread the love

ಕುಂದಾಪುರ : ಸೇವಾ ಚೇತನ ಟ್ರಸ್ಟ್ (ರಿ.), ಮೂಡುಬಗೆ ಅಂಪಾರು ಇದರ ನಾಲ್ಕನೇ ವಾರ್ಷಿಕೋತ್ಸವದ ಪ್ರಯುಕ್ತ ಜನವರಿ 11ರಂದು ಅಂಪಾರು ಮೂಡುಬಗೆ ಶಾನ್ಕಟ್ಟು ಮೈದಾನದಲ್ಲಿ ನಡೆದ ‘ನಮ್ಮೂರ ಸಂಭ್ರಮ’ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಚಿಂತಕ, ವಾಗ್ಮಿ ಪ್ರಾಧ್ಯಾಪಕ ಕುಂದಾಪುರದ ಡಾ| ಬಿ. ಬಿ .ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಅವರಿಗೆ 2024ರ ನಮ್ಮೂರ ‘ಶಿಕ್ಷಣ ರತ್ನ’ ಪ್ರಶಸ್ತಿಯನ್ನು ಹಿರಿಯ ಉದ್ಯಮಿ ಶ್ರೀ ಆನಗಳ್ಳಿ ಕರುಣಾಕರ ಹೆಗ್ಡೆ ಪ್ರದಾನ ಮಾಡಿದರು.

ಸೌತ್ ಫೀಲ್ಡ್ ಪೇಂಟ್ಸ್ನ ಆಡಳಿತ ನಿರ್ದೇಶಕ ಶ್ರೀ ಎಸ್.ಎಸ್. ಹೆಗ್ಡೆ ನಮ್ಮೂರ ಸಂಭ್ರಮವನ್ನು ಉದ್ಘಾಟಿಸಿರು. ಈ ಸಂದರ್ಭ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ ಶೆಟ್ಟಿ ಗಂಟಿಹೊಳೆ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಸಿ.ಎ. ಅಶೋಕ ಶೆಟ್ಟಿ, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ಪ್ರವೀಣ್ ಶೆಟ್ಟಿ, ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಸುಗ್ಗಿ ಸುಧಾಕರ ಶೆಟ್ಟಿ, ಆಸ್ಟ್ರೇಲಿಯಾದ ಉದ್ಯಮಿ ಆಜ್ರಿ ತಗ್ಗು೦ಜೆ ಮನೆ ದಯಾನಂದ ಶೆಟ್ಟಿ, ಮೆರಿಟಿ ಹಾಸ್ಪಿಟಾಲಿಟಿ ಪ್ರೈವೇಟ್ ಲಿಮಿಟೆಡ್ ಮುಂಬೈನ ಆಡಳಿತ ನಿರ್ದೇಶಕ ಅಶೋಕ್ ಶೆಟ್ಟಿ ಬೆಳ್ಳಾಡಿ, ಆದರ್ಶ ಶೆಟ್ಟಿ ಹಾಲಾಡಿ, ಸುರೇಶ್ ಶೆಟ್ಟಿ ಹಾಗೂ ನಮ್ಮೂರ ಸಂಭ್ರಮದ ಸ್ಥಾಪಕ ಅಧ್ಯಕ್ಷ ಸಂತೋಷ್ ಶೆಟ್ಟಿ ಮೂಡುಬಗೆ, ಅಧ್ಯಕ್ಷ ಅರುಣ್ ಶೆಟ್ಟಿ ಅಂಪಾರು, ಕೆ. ಅಶೋಕ್ ನಾಯ್ಕ್, ನವೀನ್ ಶೆಟ್ಟಿ ಹೊಸಿಮನೆ ಮತ್ತಿತರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

 

Related Articles

error: Content is protected !!