ಕುಂದಾಪುರ : ಸಾಂಸ್ಕøತಿಕ, ಸಾಹಿತ್ಯಿಕ ವಿಚಾರಗಳ ಮೂಲಕ ವಿದ್ಯಾರ್ಥಿಗಳ ಬೌದ್ಧಿಕ, ಭೌತಿಕ, ಮಾನಸಿಕ ಆರೋಗ್ಯವನ್ನು ವೃದ್ಧಿಪಡಿಸಲು ಸಾಧ್ಯ. ಹೀಗಾಗಿ ವಿದ್ಯಾರ್ಥಿಗಳ ಕ್ರಿಯಾಶೀಲ ಮನಸ್ಸಿಗೆ ಬದುಕಿನ ವಿವಿಧ ಆಯಾಮಗಳನ್ನು ಪರಿಚಯಿಸುವ ಸಲುವಾಗಿ ಇಂತಹ ಕಾರ್ಯಕ್ರಮ ಅತ್ಯುತ್ತಮವಾದುದು ಎಂದು ಮದರ್ ತೆರೆಸಾ ಪದವಿ ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕ ಶ್ರೀ ರಾಮ್ ಭಟ್ ಸಜಂಗದ್ದೆ ಹೇಳಿದರು.
ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ‘ಉಗಮ-2023’ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಅಂತರ್-ಕಾಲೇಜು ಸಾಂಸ್ಕøತಿಕ-ಸಾಹಿತ್ಯಿಕ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ಶ್ರೀ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ವಂದಿಸಿ, ಶ್ರೀಮತಿ ಪ್ರೀತಿ ಹೆಗ್ಡೆ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಕಾರ್ಯದರ್ಶಿ ಸ್ಕಂದ ಎನ್. ಛಾತ್ರ, ಸ್ಟುಡೆಂಟ್ ಕ್ವಾಲಿಟಿ ಎಶ್ಯುರೆನ್ಸ್ ಸೆಲ್‍ನ ಕಾರ್ಯದರ್ಶಿ ಚೇತನ್ ಶೆಟ್ಟಿ ಉಪಸ್ಥಿತರಿದ್ದರು. ಇಂಗ್ಲೀಷ್ ಪ್ರಾಧ್ಯಾಪಕಿ ಮೋನಿಕಾ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು ಮದರ್ ತೆರೆಸಾ ಪದವಿ ಪೂರ್ವ ಕಾಲೇಜು, ಶಂಕರನಾರಾಯಣ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು, ಬೈಂದೂರು ಸಮಗ್ರ ಪ್ರಥಮ ಹಾಗೂ ದ್ವಿತೀಯ ಬಹುಮಾನ ಪಡೆದರು.