ಕುಂದಾಪುರ : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಹಾಗೂ ಇಂಗ್ಲೀಷ್ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ನಾಯಕತ್ವ ತರಬೇತಿ ಕಾರ್ಯಾಗಾರ ನಡೆಯಿತು. ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಮೂಡಬಿದ್ರೆಯ ಭಾಷಾ ವಿಭಾಗದ ಮುಖ್ಯಸ್ಥರಾದ ಶ್ರೀ ವಿಕ್ರಂ ನಾಯಕ್ ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ನಾಯಕತ್ವ ಎಂದರೇನು? ಅದನ್ನು ತಮ್ಮೊಳೊಗೆ ರೂಡಿಸಿಕೊಳ್ಳುವ ಬಗೆ ಹೇಗೆ ಮತ್ತು ವಿದ್ಯಾರ್ಥಿ ಜೀವನದಿಂದ ಬದುಕಿನುದ್ದಕ್ಕೂ ನಾಯಕತ್ವ ಗುಣಕ್ಕಿರುವ ಮಹತ್ವವೇನು ಎಂಬುದರ ಕುರಿತು ಸವಿಸ್ತಾರವಾಗಿ ತಿಳಿಸಿಕೊಟ್ಟರು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ಸ್ವಾಗತಿಸಿದರು. ಇಂಗ್ಲೀಷ್ ಪ್ರಾಧ್ಯಾಪಕಿ ರವೀನಾ ಸಿ. ಪೂಜಾರಿ ಅತಿಥಿಯನ್ನು ಪರಿಚಯಿಸಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ದೀಪಿಕಾ ಜಿ. ವಂದಿಸಿದರು. ವಿದ್ಯಾರ್ಥಿ ಶ್ರೀನಾಭ್ ಉಪಾಧ್ಯಾಯ ನಿರೂಪಿಸಿದರು.