Home » “ಫುಡ್ ಆರ್ಟ್” – ಆಹಾರ ಮೇಳ ಕಾರ್ಯಕ್ರಮ
 

“ಫುಡ್ ಆರ್ಟ್” – ಆಹಾರ ಮೇಳ ಕಾರ್ಯಕ್ರಮ

by Kundapur Xpress
Spread the love

ಕುಂದಾಪುರ : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಫುಡ್ ಆರ್ಟ್ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ತೀರ್ಪುಗಾರರಾಗಿ ಆಗಮಿಸಿದ ವಿನಾಯಕ ಸಭಾಗೃಹ, ಕುಂಭಾಶಿ ಇದರ ಮಾಲೀಕರಾದ ಶ್ರೀ ರವಿರಾಜ್ ಉಪಾಧ್ಯ ಕಾರ್ಯಕ್ರಮವನ್ನು ಉದ್ದೇಶಿಸಿ, ನೈಸರ್ಗಿಕ ಆಹಾರದ ಮಹತ್ವ ಹಾಗೂ ದಿನನಿತ್ಯ ಜೀವನದಲ್ಲಿ ಅದರ ಉಪಯೋಗದ ಬಗ್ಗೆ ವಿದ್ಯಾರ್ಥಿಗಳಿಗೆ ಸವಿವರವಾಗಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಕಾಲೇಜು ವಿದ್ಯಾರ್ಥಿಗಳಲ್ಲಿ ಆಹಾರದ ನಿರ್ವಹಣೆ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ವೀಣಾ ಭಟ್, ಕಾರ್ಯಕ್ರಮದ ಸಂಯೋಜಕರಾದ ಶ್ರೀ ಸತೀಶ್ ಕಾಂಚನ್ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಕುಮಾರಿ ದೀಪಾ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

   

Related Articles

error: Content is protected !!