ಕುಂದಾಪುರ : ಪದವಿ ಪ್ರವೇಶಿಸಿದ ವಿದ್ಯಾರ್ಥಿಗಳು ಮೊಟ್ಟ ಮೊದಲು ಆಯ್ಕೆ ಮಾಡಿಕೊಂಡ ವಿಷಯವನ್ನು ಮತ್ತು ಸಂಸ್ಥೆಯನ್ನು ಪ್ರೀತಿಸಿ, ಆ ಮೂಲಕ ಕೇಳಿ ಕಲಿಯಲು ಆರಂಭಿಸುತ್ತೀರಿ. ಈ ಆರಂಭ ಹೊಸ ಆಲೋಚನೆಗಳನ್ನು ಹುಟ್ಟು ಹಾಕುವ ಮೂಲಕ ಸೃಜನಾತ್ಮಕವಾಗಿ ಬೆಳೆಯುವಿರಿ. ಆಗ ಪಡೆದ ಪದವಿ ಅರ್ಥಪೂರ್ಣವಾಗುತ್ತದೆ ಎಂದು ಉಡುಪಿಯ ಎಸ್.ಡಿ.ಎಮ್. ಆಯುರ್ವೇದ ಕಾಲೇಜಿನ ವೈದ್ಯಕೀಯ ಅಧೀಕ್ಷಕ ಡಾ| ನಾಗರಾಜ್ ಎಸ್. ಹೇಳಿದರು.
ಅವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಶ್ರಯದಲ್ಲಿ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಆಯೋಜಸಿದ ‘ಪ್ರೇರಣಾ’- ಪರಿಚಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪದವಿ ಶಿಕ್ಷಣದ ಮಹತ್ವವನ್ನು ತಿಳಿಸಿದರು.
ಉಪಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ಅತಿಥಿಗಳನ್ನು ಪರಿಚಯಿಸಿ, ಪ್ರಾಧ್ಯಾಪಕರಾದ ಶ್ವೇತಾ ಭಂಡಾರಿ ವಂದಿಸಿ, ಶ್ರೀಮತಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.