ಕುಂದಾಪುರ : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಪ್ರವೇಶಕ್ಕಾಗಿ ನಡೆಸುವ ಪಿಜಿಸಿಇಟಿ ಪರೀಕ್ಷೆಯ ಕುರಿತು ಮಾಹಿತಿ ಕಾರ್ಯಾಗಾರವನ್ನು ಸೆಪ್ಟೆಂಬರ್ 10ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರಿನ ವಿಸ್ಡಮ್ ಇನ್ಸ್ಟಿಟ್ಯೂಷನ್ಸ್ ನೆಟ್‌ವರ್ಕ್ ಸಂಸ್ಥೆಯ ಸಿ.ಇ.ಓ. ಶ್ರೀ ಅಭಿಲಾಷ್ ಕ್ಷತ್ರಿಯ ಪರೀಕ್ಷೆಯ ತಯಾರಿ ಹೇಗಿರಬೇಕು, ಪರೀಕ್ಷೆ ಯಾವ ಸಂದರ್ಭದಲ್ಲಿ ನಡೆಸಲಾಗುತ್ತದೆ, ಪರೀಕ್ಷೆಯ ಪೂರ್ವ ತಯಾರಿಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉನ್ನತ ಶಿಕ್ಷಣವನ್ನು ಪಡೆಯುವಲ್ಲಿ ಪಿಜಿಸಿಇಟಿಯ ಮಹತ್ವವನ್ನು ತಿಳಿಸಿದರು. ಕಾಲೇಜಿನ ಉಪ-ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು.
ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ಶ್ರೀಮತಿ ನಂದಾ ರೈ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಅವಿತಾ ಎಮ್. ಕೊರೆಯಾ ಅತಿಥಿಗಳನ್ನು ಪರಿಚಯಿಸಿ, ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕರಾದ ಚೈತಾಲಿ ವಂದಿಸಿದರು.