ಕುಂದಾಪುರ : ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಭಿರುಚಿಗಳು ಮುಖ್ಯ. ಹೀಗಾಗಿ ವಿದ್ಯಾರ್ಥಿಗಳ ಪ್ರತಿಭೆಗೆ ಸೂಕ್ತ ಅವಕಾಶ ಕಲ್ಪಿಸಿಕೊಟ್ಟಾಗ ಪ್ರತಿಭಾ ಅನಾವರಣ ಸಾಧ್ಯ ಎಂದು ಕುಂದಾಪುರ ಸೇಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ರೇಷ್ಮಾ ಫೆರ್ನಾಂಡಿಸ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಆಯೋಜಿಸಿದ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸ್ಪರ್ಧೆ ‘ಉಗಮ-2024’ರ ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಇನ್ನೊರ್ವ ಮುಖ್ಯ ಅತಿಥಿಗಳಾದ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂದೀಪ್ ಗಾಣಿಗ ಮಾತನಾಡಿ, ಪದವಿ ಕಾಲೇಜಿನಲ್ಲಿ ಈ ರೀತಿಯ ಕಾರ್ಯಕ್ರಮಗಳು ಪೂರಕ ವಾತಾವರಣವನ್ನು ಸೃಷ್ಟಿಸುತ್ತದೆ. ಇದು ಸಂಸ್ಥೆಯ ಸೃಜನಶೀಲತೆಯ ಪ್ರತೀಕ ಎಂದರು. ಈ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಇಂಗ್ಲೀಷ್ ಪ್ರಾಧ್ಯಾಪಕ ಶ್ರೀ ಸ್ಟಾಲಿನ್ ಡಿ’ಸೋಜಾ ಹಾಗೂ ವಾಣಿಜ್ಯ ಪ್ರಾಧ್ಯಾಪಕಿ ಪೂಜಾ ಕುಂದರ್ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಹಾಗೂ ಶಿಸ್ತು ನಿಕಾಯಕರಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಕಾರ್ಯದರ್ಶಿ ವಿನಾಯಕ್ ಅಡಿಗ, ಎಸ್‌ಕ್ಯೂಎಸಿ ಕನ್ವೇನರ್ ಶೃದ್ಧಾ ಆರ್. ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ರೇಷ್ಮಾ ಶೆಟ್ಟಿ ವಂದಿಸಿದರು. ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ಪದವಿ ವಿದ್ಯಾರ್ಥಿಗಳಿಗಾಗಿ ರಚಿಸಿದ ‘ಇಂಡಿವಿಜ್ವಲ್ ಆ್ಯಂಡ್ ಟೀಮ್ ಮ್ಯಾನೇಜ್‌ಮೆಂಟ್’ ಪುಸ್ತಕ ಹಾಗೂ ವಾಣಿಜ್ಯ ಪ್ರಾಧ್ಯಾಪಕರಾದ ಶ್ರೀ ಶರತ್ ಹಾಗೂ ಅಕ್ಷಯ್ ಕುಮಾರ್ ರಚಿಸಿದ ‘ಫಂಡಮೆಂಟಲ್ಸ್ ಆಫ್ ಬಿಸಿನೆಸ್ ಅನಾಲಿಟ್ಟಿಕ್ಸ್’ ಪುಸ್ತಕಗಳನ್ನು ಬಿಡುಗಡೆಗೊಳಿಸಲಾಯಿತು. ಇದರೊಂದಿಗೆ ಕಾಲೇಜಿನ ಅರ್ಧ ವಾರ್ಷಿಕ ಸಂಚಿಕೆ ‘ಕ್ಯಾಂಪಸ್ ವಾಯ್ಸ್ ಅನಾವರಣಗೊಳಿಸಲಾಯಿತು.