ಕೋಟ : ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇದರ ಮೂಕಾಂಬಿಕಾ ಆಡಿಟೋರಿಯಂನಲ್ಲಿ ವಾಣಿಜ್ಯ ವಿಭಾಗದ ಸಂಯೋಜನೆಯಲ್ಲಿ ವಿದ್ಯಾರ್ಥಿಗಳಿಗೆ ಬ್ಯಾಂಕ್ ಬ್ಯಾಟಲ್ ೨.೦ ಮಾಹಿತಿ ಶಿಬಿರ ಜರುಗಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ ಶೆಟ್ಟಿಯವರು ಶಿಬಿರದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕೆನರಾ ಬ್ಯಾಂಕ್ ಶಾಖೆಯ ಗ್ರಾಹಕ ಸೇವಾ ವಿಭಾಗದ ಸಹಾಯಕರಾದ ಸುನಿಲ್ ಎಸ್. ಮೊಗವೀರ, ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಉಪಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೆ. ಮತ್ತು ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೀಣಾ ವಿ. ಭಟ್ ಇವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಪೂರ್ವದಲ್ಲಿ ವಿದ್ಯಾರ್ಥಿಗಳು ಬ್ಯಾಂಕ್ ಬ್ಯಾಟಲ್ ೨.೦ ಕುರಿತು ಆಯೋಜಿಸಿದ್ದ ಪ್ರಾತ್ಯಕ್ಷಿಕೆಯನ್ನು ಅತಿಥಿಗಳು ಪರಿಶೀಲಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಕೋಟ ಸಹಕಾರಿ ವ್ಯವಸಾಯಕ ಸಂಘ, ಕೋಟ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿಯವರು ಬ್ಯಾಂಕಿAಗ್ ಕ್ಷೇತ್ರದ ಹಿನ್ನೆಲೆ, ವ್ಯವಹಾರ ಕ್ರಮ, ಸಹಕಾರಿ ಮತ್ತು ರಾಷ್ಟಿçÃಕೃತ ಬ್ಯಾಂಕುಗಳ ನಡುವೆ ಇರುವ ವ್ಯತ್ಯಾಸ ಇವುಗಳ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಿದರು. ಸಹಕಾರಿ ಬ್ಯಾಂಕುಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಇದೇ ವೇಳೆ ಕರೆ ನೀಡಿದರು.
ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೀಣಾ ವಿ. ಭಟ್ ಇವರು ಸ್ವಾಗತಿಸಿದರು. ಉಪಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೆ. ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಪ್ರೀತಿ ಹೆಗ್ಡೆ ಇವರು ಧನ್ಯವಾದ ಸಮರ್ಪಿಸಿದರು. ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸೌಭಾಗ್ಯ ಕಿಣಿ ಇವರು ಕಾರ್ಯಕ್ರಮ ನಿರೂಪಿಸಿದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಶರತ್ ಕುಮಾರ್ ಮತ್ತು ಅಕ್ಷಯ್ ಕುಮಾರ್ ಇವರು ಕಾರ್ಯಕ್ರಮ ಸಂಯೋಜಿಸಿದರು.
ಸAಘದ ಸಿಬ್ಬಂದಿ ಸಹನಾ ಇವರು ಪ್ರಾರ್ಥಸಿದರು. ಸಂಘದ ವ್ಯವಸ್ಥಾಪಕರಾದ ಶರತ್ ಕುಮಾರ್ ಶೆಟ್ಟಿ ಇವರು ಗಣ್ಯರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಶೋಭಾ ಇವರು ಧನ್ಯವಾದ ಸಮರ್ಪಿಸಿದರು.
ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇದರ ಮೂಕಾಂಬಿಕಾ ಆಡಿಟೋರಿಯಂನಲ್ಲಿ ವಾಣಿಜ್ಯ ವಿಭಾಗದ ಸಂಯೋಜನೆಯಲ್ಲಿ ವಿದ್ಯಾರ್ಥಿಗಳಿಗೆ ಬ್ಯಾಂಕ್ ಬ್ಯಾಟಲ್ ೨.೦ ಮಾಹಿತಿ ಶಿಬಿರದಲ್ಲಿ ಕೋಟ ಸಹಕಾರಿ ವ್ಯವಸಾಯಕ ಸಂಘ, ಕೋಟ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ಮಾಹಿತಿ ನೀಡಿದರು. ಕೆನರಾ ಬ್ಯಾಂಕ್ ಶಾಖೆಯ ಗ್ರಾಹಕ ಸೇವಾ ವಿಭಾಗದ ಸಹಾಯಕರಾದ ಸುನಿಲ್ ಎಸ್. ಮೊಗವೀರ, ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಉಪಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೆ. ಮತ್ತಿತರರು ಇದ್ದರು.