ಕುಂದಾಪುರ :ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಂದಾಪುರ ಜ್ಯೂನಿಯರ್ ಕಾಲೇಜಿನ ಕಛೇರಿ ಸಿಬ್ಬಂದಿ ಸುರೇಶ ಖಾರ್ವಿಯವರಿಗೆ ಲಯನ್ಸ್ ಕ್ಲಬ್ ನಾವುಂದದ ಅಧ್ಯಕ್ಷರಾದ ಜಗದೀಶ ಶೆಟ್ಟಿ ಕುದ್ರುಕೋಡು ಅವರು ‘ಕಾಯಕ ಯೋಗಿ’ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಅವರು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಯಾವುದೇ ವೃತ್ತಿಯನ್ನು ಆಯ್ದುಕೊಂಡರೂ ನಿಷ್ಟೆಯಿಂದ ಕರ್ತವ್ಯ ನಿರ್ವಹಿಸಬೇಕು. ಪ್ರಾಮಾಣೆಕ ಸೇವೆಯನ್ನು ಸಮಾಜ ಗುರುತಿಸುತ್ತದೆ ಎಲೆಮರೆಯ ಕಾಯಿಯಂತೆ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಶ್ಲಾಘನೀಯ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜೆಸಿಐ ಕುಂದಾಪುರ ಸಿಟಿಯ ಅಧ್ಯಕ್ಷರಾದ ಡಾ| ಸೋನಿ ಡಿ’ ಕೊಸ್ಟ, ಜೆಸಿಐ ಉಪ್ಪುಂದದ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಮುಖ್ಯ ಅತಿಥಿಗಳಾಗಿ ಉಪಸ್ಧಿತರಿದ್ದರು. ಉಪಪ್ರಾಂಶುಪಾಲರು ಮತ್ತು ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿ, ಸ್ವಾಗತಿಸಿದರು. ಎನ್.ಎಸ್.ಎಸ್. ಸಹಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿನಿ ಅನುಷಾ ಕಾರ್ಯಕ್ರಮ ನಿರೂಪಿಸಿದರು. ಎನ್.ಎಸ್.ಎಸ್. ಸ್ವಯಂಸೇವಕರು ಪ್ರಾರ್ಥಿಸಿದರು.