Home » ವಾರ್ಷಿಕ ಸಂಚಿಕೆ “ಶಿಖರ” ಅನಾವರಣ
 

ವಾರ್ಷಿಕ ಸಂಚಿಕೆ “ಶಿಖರ” ಅನಾವರಣ

by Kundapur Xpress
Spread the love

ಕುಂದಾಪುರ : ಮಂಗಳೂರು ವಿಶ್ವವಿದ್ಯಾನಿಲಯ ಅಂತರ್-ಕಾಲೇಜು ಮಟ್ಟದ ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಗಮನ ಸೆಳೆದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2022-23ನೇ ಸಾಲಿನ ವಾರ್ಷಿಕ ಸಂಚಿಕೆ ‘ಶಿಖರ”ವನ್ನು ಕಾಲೇಜಿನ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಎಸ್.ಎ. ಪ್ರಭಾಕರ್ ಶರ್ಮರವರು ಅನಾವರಣಗೊಳಿಸಿ, ಶುಭ ಹಾರೈಸಿದರು.

ನಿವೃತ್ತ ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಶ್ರೀ ಹೆಚ್. ಜಯಶೀಲ ಶೆಟ್ಟಿ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಸುಧಾಕರ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಬಿ.ಎಮ್. ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶ್ರೀ ಸೀತಾರಾಮ ನಕ್ಕತ್ತಾಯ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಶಿಖರ ವಾರ್ಷಿಕ ಸಂಚಿಕೆಯ ನಿರ್ವಾಹಕ ಸಂಪಾದಕರಾದ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಹಾಗೂ ಐಕ್ಯೂಎಸಿ ಸಂಯೋಜಕಿ ಶ್ರೀಮತಿ ದೀಪಿಕಾ ಜಿ. ಉಪಸ್ಥಿತರಿದ್ದರು. ಶ್ರೀಮತಿ ವಿಲ್ಮಾ ಡಿ’ಸೋಜಾ ವಂದಿಸಿ, ಶ್ರೀಮತಿ ರೇಷ್ಮಾ ಶೆಟ್ಟಿ ನಿರೂಪಿಸಿದರು.

   

Related Articles

error: Content is protected !!