ಕುಂದಾಪುರ : ಇಲ್ಲಿನ ಪ್ರತಿಷ್ಠಿತ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವೃತ್ತಿ ಮಾರ್ಗದರ್ಶನ ವಿಭಾಗವು ಬಾರ್ಕ್ಲೇಸ್ ಬ್ಯಾಂಕ್ ಪಿಎಲ್‌ಸಿ ಇದರ ಸಹಯೋಗದೊಂದಿಗೆ 3 ದಿನಗಳ ಉದ್ಯೋಗ ಮತ್ತು ಸಂದರ್ಶನ ಕೌಶಲ್ಯಗಳ ತರಬೇತಿಯ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿತು.
ಅತಿಥಿ ನೆಲೆಯಲ್ಲಿ ಮಾತನಾಡಿದ ಫ್ರೀಲ್ಯಾನ್ಸ್ ಸಾಫ್ಟ್ ಸ್ಕಿಲ್ಸ್ ತರಬೇತುದಾರರಾದ ಶ್ರೀ ದಾಮೋದರನ್ ಸಿ. ಅವರು ಸಮಯ ನಿರ್ವಹಣೆಯು ವ್ಯಕ್ತಿಯು ಯಶಸ್ಸನ್ನು ಹೊಂದುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಇನ್ನೋರ್ವ ಅತಿಥಿ ಸಾಫ್ಟ್ ಸ್ಕಿಲ್ಸ್ ತರಬೇತುರರಾದ ಶ್ರೀ ದೀಪಕ್ ರಾವ್ ಸಿ.ಎನ್. ಮಾತನಾಡಿ, ಔದ್ಯೋಗಿಕ ಕ್ಷೇತ್ರಗಳಲ್ಲಿ ನಮ್ಮಲ್ಲಿನ ಕೌಶಲ್ಯಗಳು, ಅನುಭವಗಳು ಹೆಚ್ಚು ಅವಕಾಶಗಳನ್ನು ಕಲ್ಪಿಸಿಕೊಡುತ್ತದೆ. ಇಂತಹ ತರಬೇತಿಗಳ ಪರಿಪೂರ್ಣ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ವೃತ್ತಿ ಮಾರ್ಗದರ್ಶನ ಘಟಕದ ಸಂಯೋಜಕರಾದ ಶ್ರೀ ಮಹೇಶ್ ಕುಮಾರ್, ಶ್ರೀ ರಜತ್ ಬಂಗೇರ, ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿ ಶ್ರೀ ಹರೀಶ್ ಕಾಂಚನ್ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ರಶ್ಮಿ ಉಡುಪ ಪ್ರಾರ್ಥಿಸಿ, ಶ್ರೀನಿಧಿ ಶೆಟ್ಟಿ ಸ್ವಾಗತಿಸಿ, ವಿನಿತಾ, ವರ್ಷಲಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿ, ಶರತ್ ಶೆಟ್ಟಿ ವಂದಿಸಿ, ಅಭಿನಯ ಕಾರ್ಯಕ್ರಮ ನಿರೂಪಿಸಿದರು.