ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗವು ಆಯೋಜಿಸಿರುವ ‘ವಿ-ಗ್ರೋ’ ಬ್ಯುಸಿನೆಸ್ ಡೇ ಮೂರು ಹಂತದಲ್ಲಿ ಆಯೋಜನೆಗೊಂಡು ಮೊದಲನೇ ಹಂತದಲ್ಲಿ ವ್ಯವಹಾರ ಯೋಜನೆಯ ಪ್ರಸ್ತುತಿ, ಎರಡನೇ ಹಂತದಲ್ಲಿ ತಾವೇ ತಯಾರಿಸಿದ ಉತ್ಪನ್ನಗಳ ಮಾರಾಟ ಹಾಗೂ ಮೂರನೇ ಹಂತದಲ್ಲಿ ಸಂಪೂರ್ಣ ಹಣಕಾಸಿನ ಆಯ-ವ್ಯಯ ಪಟ್ಟಿಗಳನ್ನು ಪ್ರಸ್ತುತಪಡಿಸುವ ಕಾರ್ಯಕ್ರಮ ನಡೆಯಿತು.
ಬಿ.ಕಾಂ. ಪದವಿದರರಿಗೆ ನವ ಉದ್ಯಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ಕಲ್ಪಿಸುವ ಯೋಜನೆಗಳ ಕುರಿತು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿರುವ ಕುಂದಾಪುರ SBI ನ ರಿಲೇಷನ್‍ಶಿಪ್ ಮ್ಯಾನೇಜರ್ ಶ್ರೀ ಅಣ್ಣಪ್ಪ ಶೆಟ್ಟಿ ಹೇಳಿದರು.
ತೀರ್ಪುಗಾರರಾಗಿ ಕರ್ನಾಟಕ ರಾಜ್ಯ ಸಿ.ಎ. ಅಸೋಸಿಯೇಶನ್ ಸದಸ್ಯರಾಗಿರುವ ಶ್ರೀ ಪ್ರದೀಪ್ ಜೋಗಿ, ಶ್ರೀ ರುಕ್ಮಿಣಿ ಶೆಡ್ತಿ ಮೆಮೋರಿಯಲ್ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು, ಬಾರಕೂರಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀ ಕಾರ್ತಿಕ್ ಪೈ, ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕೋಟ ಪಡುಕೆರೆಯ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀ ಮನೋಹರ ಉಪ್ಪುಂದ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ಭಟ್ ಪ್ರಾಸ್ತಾವಿಸಿದರು. ವಾಣಿಜ್ಯ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ವಿನಯಾ ವಿ. ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿ, ಶ್ರೀ ಸತೀಶ್ ಶೆಟ್ಟಿ ವಿಜೇತರ ಪಟ್ಟಿಯನ್ನು ವಾಚಿಸಿದರು. ಶ್ರೀ ರಾಜೇಶ್ ಶೆಟ್ಟಿ, ದೀಪಾ ಪೂಜಾರಿ ನಿರೂಪಿಸಿದರು. ವಿದ್ಯಾರ್ಥಿನಿ ಪವಿತ್ರಾ ಪೈ ಪ್ರಾರ್ಥಿಸಿದರು.
ಪ್ರಥಮ ಸ್ಥಾನ ತೃತೀಯ ಬಿ.ಕಾಂ. ‘ಎ’, ದ್ವಿತೀಯ ಸ್ಥಾನ ‘ಡಿ’ ಹಾಗೂ ತೃತೀಯ ಸ್ಥಾನವನ್ನು ತೃತೀಯ ಬಿ.ಕಾಂ. ‘ಬಿ’ ವಿಜೇತರಾಗಿದ್ದಾರೆ.