Home » ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರ
 

ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರ

by Kundapur Xpress
Spread the love

ಕುಂದಾಪುರ : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕವು ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಸಹಯೋಗದೊಂದಿಗೆ ‘3 ದಿನದ ಸಾಫ್ಟ್ ಸ್ಕಿಲ್ ತರಬೇತಿ’ಯನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೋಟಿವೇಶನ್ ಸ್ಪೀಕರ್ ಡಾ| ಶರಣ್ ಕುಮಾರ್ ಶೆಟ್ಟಿಯವರು ಉದ್ಯೋಗ ಪಡೆಯುವಲ್ಲಿ ಅಂಕಗಳಷ್ಟೆ ಅಗತ್ಯವಿರುವ ಕೌಶಲ್ಯಗಳ ಬಗ್ಗೆ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಕೌಶಲ್ಯಗಳು ವಿದ್ಯಾರ್ಥಿಗಳನ್ನು ಸ್ಪರ್ಧಾ ಚೇತನರನ್ನಾಗಿಸಿ ಅವಕಾಶಗಳನ್ನು ತೆರೆದುಕೊಳ್ಳುವಂತೆ ಮಾಡುತ್ತದೆ ಎಂದರು. ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್‌ನ ಶ್ರೀ ಜೌಶ್ ಡ್ಯಾನಿಯಲ್ ಮಾತನಾಡಿ 3 ದಿನದ ಕಾರ್ಯಾಗಾರದ ಬಗ್ಗೆ ವಿವರಿಸಿದರು. ವೃತ್ತಿ ಮಾರ್ಗದರ್ಶನ  ಘಟಕದ ಸಂಯೋಜಕರಾದ ಶ್ರೀ ಮಹೇಶ್ ಕುಮಾರ್ ಉಪಸ್ಥಿತರಿದ್ದರು.

 ಈ ಸಂದರ್ಭ ಉಪಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ವಾಣಿಜ್ಯ ಪ್ರಾಧ್ಯಾಪಕರಾದ ಶ್ರೀ ಅಕ್ಷಯ್ ಕುಮಾರ್ ಅತಿಥಿಯನ್ನು ಪರಿಚಯಿಸಿದರು. ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿ ಶ್ರೀ ಸುರೇಶ್ ಕಾಮತ್ ಕೆ. ವಂದಿಸಿದರು. ಇಂಗ್ಲೀಷ್ ಪ್ರಾಧ್ಯಾಪಕಿ ಶ್ರೀಮತಿ ಸ್ವಾತಿ ಜಿ. ರಾವ್ ನಿರೂಪಿಸಿದರು. ವಿದ್ಯಾರ್ಥಿನಿ ಅನುಷಾ ಪ್ರಾರ್ಥಿಸಿದರು.

   

Related Articles

error: Content is protected !!