ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ‘ಮೆಗಾ ಪ್ಲೇಸ್‍ಮೆಂಟ್ ಡ್ರೈವ್’ ನಡೆಯಲಿದೆ.
ಈ ಉದ್ಯೋಗ ಮೇಳದಲ್ಲಿ ಸುಮಾರು 15ಕ್ಕೂ ಹೆಚ್ಚು ಖಾಸಗಿ ಕಂಪೆನಿಗಳು ಭಾಗವಹಿಸುತ್ತಿದ್ದು, ನಮ್ಮ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಇದು ಉತ್ತಮ ಅವಕಾಶ ಮತ್ತು ವಿದ್ಯಾರ್ಥಿಗಳು ಇದನ್ನು ಸಂಪೂರ್ಣ ಸದುಪಯೋಗಪಡಿಸಿಕೊಳ್ಳಬಹುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.