ಕುಂದಾಪುರ: ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ, ಅದು ಸಂಸ್ಕøತಿಯ ಪ್ರತೀಕ. ಹೀಗೆ ಭಾರತೀಯ ಸಂಸ್ಕøತಿಯ ಪ್ರತೀಕವಾಗಿ ಇಲ್ಲಿನ ರಾಷ್ಟ್ರ ಭಾಷೆಯಾದ ಹಿಂದಿಯನ್ನು ಕಾಣಬಹುದು. ಹೀಗಾಗಿ ಸಂಸ್ಕøತಿ ಸಂಸ್ಕಾರವನ್ನು ಗೌರವಿಸಿ ಅನುಸರಿಸಿ ಎಂದು ಜಿ.ಎಮ್. ವಿದ್ಯಾನಿಕೇತನ್ ಆಂಗ್ಲ ಮಾಧ್ಯಮ ಶಾಲೆಯ ಹಿಂದಿ ಶಿಕ್ಷಕಿ ಶ್ರೀಮತಿ ಕಿರಣಾ ತಿವಾರಿ ಹೇಳಿದರು.
ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಆಯೋಜಿಸಿದ ಹಿಂದಿ ದಿವಸ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ| ದೀಪಾ ಅತಿಥಿಗಳನ್ನು ಪರಿಚಯಿಸಿದರು. ಹಿಂದಿ ಉಪನ್ಯಾಸಕಿ ಶ್ರೀಮತಿ ರೇವತಿ ಡಿ. ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಪವಿತ್ರಾ ಪೈ ಪ್ರಾರ್ಥಿಸಿ, ಜ್ಞಾನೇಶ್ ಸ್ವಾಗತಿಸಿ, ಸಮೃದ್ಧಿ ಕಿಣಿ ನಿರೂಪಿಸಿದರು.