ಕುಂದಾಪುರ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯಾದ್ಯಂತ ಹಮ್ಮಿಕೊಂಡ ಭಾರತ ಸಂವಿಧಾನದ ಪ್ರಸ್ತಾವನೆಯ ಓದು ಕಾರ್ಯಕ್ರಮವನ್ನು ಡಾ| ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಆಚರಿಸಲಾಯಿತು.
ಕಾಲೇಜಿನ ಸರ್ವ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಸಂವಿಧಾನದ ಪ್ರಸ್ತಾವನೆಯನ್ನು ಓದುವುದರ ಮುಖಾಂತರ ಪ್ರತಿಜ್ಞೆಗೈದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಹಾಗೂ ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು.