ಕುಂದಾಪುರ : ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳನ್ನು ಬೆಳೆಸಲು ಎನ್.ಎಸ್.ಎಸ್. ಸಹಕಾರಿ. ವಿದ್ಯಾರ್ಥಿ ದೆಸೆಯಲ್ಲಿ ಸಕ್ರಿಯವಾಗಿ ಇಂತಹ ಸೇವಾ ಘಟಕಗಳಲ್ಲಿ ತೊಡಗಿಸಿಕೊಂಡರೆ ವಿದ್ಯಾರ್ಥಿಗಳಲ್ಲಿ ರಚನಾತ್ಮಕ ಬದಲಾವಣೆ ಆಗುವುದರ ಜೊತೆಗೆ ಭವಿಷ್ಯದಲ್ಲಿ ಸತ್ಪ್ರಜೆಗಳಾಗಲು ಸಾಧ್ಯ ಎಂದು ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಶ್ರೀ ಕಿರಣ್ ಹೇಳಿದರು.
ಅವರ ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕ ಆಯೋಜಿಸಿದ ‘ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ’ಯನ್ನು ಉದ್ದೇಶಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೋ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಹಾಗೂ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು. ಎನ್.ಎಸ್.ಎಸ್. ಸಹ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ನಿರೂಪಿಸಿ, ವಂದಿಸಿದರು. ಎನ್.ಎಸ್.ಎಸ್. ಸ್ವಯಂಸೇವಕಿ ಪವಿತ್ರಾ ಪೈ ಪ್ರಾರ್ಥಿಸಿದರು.