ಕುಂದಾಪುರ : ಆಹಾರ ಸೇವನೆಯ ಕ್ರಮ ಮತ್ತು ಉತ್ತಮ ಆಹಾರ ಸೇವನೆಯ ಪ್ರಾಮುಖ್ಯತೆ ಮತ್ತು ಉಪಯೋಗವನ್ನು ಆನೆಗುಡ್ಡೆಯ ವಿನಾಯಕ ಸಭಾಗೃಹದ ಮಾಲಿಕರಾದ ಶ್ರೀ ರವಿರಾಜ್ ಉಪಾಧ್ಯ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.
ಅವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಶ್ರಯದಲ್ಲಿ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಆಯೋಜಸಿದ ‘ಪ್ರೇರಣಾ’ ಪೂರ್ವ ಪರಿಚಯ ಕಾರ್ಯಕ್ರಮದಲ್ಲಿ “ಆಹಾರ ಪದ್ಧತಿ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದರು. ಈ ಸಂದರ್ಭ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು.
ವಾಣಿಜ್ಯ ವಿಭಾಗದ ಪ್ರಾಧ್ಯಾಪಕಿ ಶ್ರೀಮತಿ ಪ್ರೀತಿ ಹೆಗ್ಡೆ ಸ್ವಾಗತಿಸಿ, ಅತಿಥಿಗಳನ್ನು ಪರಿಚಯಿಸಿ, ಕಾರ್ಯಕ್ರಮ ನಿರೂಪಿಸಿದರು.